ಸಮಗ್ರ ಸುದ್ದಿ

ಬೈಕ್ ಟ್ಯಾಕ್ಸಿ: ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ಅಂತಿಮ ನಿರ್ಧಾರ- ಸಚಿವ ಬೈರತಿ ಸುರೇಶ್

Share

ಬೆಂಗಳೂರು: ಬೈಕ್ ಟ್ಯಾಕ್ಸಿ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ಬೈರತಿ ಸುರೇಶ್, ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕಾಗುತ್ತದೆ. ಆದಾಗ್ಯೂ ಈ ಕುರಿತು ಅಡ್ವೋಕೇಟ್ ಜನರಲ್ ಅವರೊಂದಿಗೆ ಇನ್ನೊಮ್ಮೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಸುಪ್ರೀಂಕೋರ್ಟ್ ನಿರ್ದೇಶನದಂತೆ ಬೈಕ್ ಟ್ಯಾಕ್ಸಿ ನಿಷೇಧ ಮಾಡುವ ಬದಲು ಅನೇಕ ನಿಯಮಗಳನ್ನು ರೂಪಿಸಿ ನಿರ್ಬಂಧ ಹೇರುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದೇವೆ. ಈ ಸಂಬಂಧ ನಿಯಮಗಳನ್ನು ರೂಪಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬೈಕ್ ಟ್ಯಾಕ್ಸಿಯಲ್ಲಿ ಪ್ರಯಾಣ ಮಾಡುವ ಸಹಪ್ರಯಾಣಿಕರ ಅದರಲ್ಲೂ ಪ್ರಮುಖವಾಗಿ ಮಹಿಳಾ ಪ್ರಯಾಣಿಕರ ಸುರಕ್ಷತೆ ನಮ್ಮ ಆದ್ಯತೆ. ಈ ಹಿನ್ನೆಲೆಯಲ್ಲಿ ಬೈಕ್ ಟ್ಯಾಕ್ಸಿ ಚಲಾಯಿಸುವವರ ದಾಖಲೆಗಳು, ಜಿಪಿಎಸ್ ಅಳವಡಿಕೆ, ವಾಹನಕ್ಕೆ ವಿಮೆ ಮತ್ತು ಇತರ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಇಂತಹ ಹಲವು ನಿಯಮಗಳನ್ನು ರೂಪಿಸಿ ಬೈಕ್ ಟ್ಯಾಕ್ಸಿಗೆ ಅವಕಾಶ ನೀಡುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.


Share

You cannot copy content of this page