ಸಮಗ್ರ ಸುದ್ದಿ

68.61 ಕೋಟಿ ಮೌಲ್ಯದ  ಸರ್ಕಾರಿ  ಜಮೀನು ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ

Share

ಬೆಂಗಳೂರು :  ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 68.61 ಕೋಟಿ ಅಂದಾಜು ಮೌಲ್ಯದ ಒಟ್ಟು 9 ಎಕರೆ 0.01 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೊಕಟ್ಟೆ, ಸರ್ಕಾರಿ ಕುಂಟೆ, ಗೋಮಾಳ, ಖರಾಬು, ಖರಾಬು ಕೆರೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.

ಬೆಂಗಳೂರು ಪೂರ್ವ ತಾಲ್ಲೂಕಿನ ವರ್ತೂರು ಹೋಬಳಿಯ ಕೊಡತಿ ಗ್ರಾಮದ ಸ.ನಂ: 184 ಗೊಕಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05  ಗುಂಟೆಗಳಾಗಿದ್ದು ಅಂದಾಜು ಮೌಲ್ಯದ ರೂ.1.50 ಕೋಟಿಗಳಾಗಿರುತ್ತದೆ.

ಆನೇಕಲ್ ತಾಲ್ಲೂಕಿನ ಸರ್ಜಾಪುರ ಹೋಬಳಿಯ ಎಸ್‌ ಮೇಡಹಳ್ಳಿ ಗ್ರಾಮದ ಸ.ನಂ. 19 ಸರ್ಕಾರಿ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.08 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.40 ಲಕ್ಷಗಳಾಗಿರುತ್ತದೆ. ಜಿಗಣಿ ಹೋಬಳಿಯ ಮಹಾಂತಲಿಂಗಪುರ ಗ್ರಾಮದ ಸ.ನಂ. 56ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.10 ಗುಂಟೆ ಗಳಾಗಿದ್ದು, ಅಂದಾಜು ಮೌಲ್ಯ 0.46 ಲಕ್ಷಗಳಾಗಿರುತ್ತದೆ .  
 
ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಹೋಬಳಿಯ ಅಜ್ಜನಹಳ್ಳಿ ಗ್ರಾಮದ  ಸ.ನಂ 111ರ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.25 ಲಕ್ಷಗಳಾಗಿರುತ್ತದೆ. ಬೇಗೂರು ಹೋಬಳಿಯ ಚಿಕ್ಕತೋಗೂರು ಗ್ರಾಮದ  ಸ.ನಂ 18ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0-03 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ  ರೂ. 1.50 ಕೋಟಿಗಳಾಗಿರುತ್ತದೆ.   

ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ  ಹೋಬಳಿಯ ಕಾಚೋಹಳಿ ಗ್ರಾಮದ ಸ.ನಂ 43 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. 12.00 ಕೋಟಿಗಳಾಗಿರುತ್ತದೆ.  ಯಶವಂತಪುರ ಹೋಬಳಿಯ ಕಾಚೋಹಳಿ ಗ್ರಾಮದ ಸ.ನಂ 71 ರ ಖರಾಬು ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 6 ಎಕರೆ 0.08 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. 50.00 ಕೋಟಿಗಳಾಗಿರುತ್ತದೆ.

ಯಲಹಂಕ ತಾಲ್ಲೂಕಿನ ಯಲಹಂಕ  ಹೋಬಳಿಯ ಲಕ್ಷ್ಮಿಸಾಗರ ಗ್ರಾಮದ  ಸ.ನಂ 35/1 ರ ಖರಾಬ್ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0-22 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 2.50 ಕೋಟಿಗಳಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ  ಜಿಲ್ಲಾಧಿಕಾರಿಗಳ ಕಚೇರಿಯ ಕಚೇರಿ ಸಹಾಯಕರು, ವಿವಿಧ ತಾಲ್ಲೂಕಿನ ತಹಶೀಲ್ದಾರ್  ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.


Share

You cannot copy content of this page