ಸಮಗ್ರ ಸುದ್ದಿ

ಮಾಜಿ ಸಚಿವ, ಹಿರಿಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ವಿಧಿವಶ

Share

ಬೆಂಗಳೂರು: ಮಾಜಿ ಸಚಿವರು, ಹಿರಿಯ ರಾಜಕೀಯ ಮುತ್ಸದ್ದಿ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (95) ಅವರು ಇಂದು ಸಂಜೆ 6.45ಕ್ಕೆ ವಿಧಿವಶರಾಗಿದ್ದಾರೆ.

ವಯೋಸಹಜ, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಉಸಿರಾಟದ ಸಮಸ್ಯೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಕಳೆದ ಒಂದು ತಿಂಗಳಿನಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 95 ವರ್ಷದಲ್ಲೂ ಶಾಸಕರಾಗಿ ಗುರುತಿಸಿಕೊಂಡಿದ್ದ ಶಿವಶಂಕರಪ್ಪ ಏಕೈಕ ಹಿರಿಯ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದವರು ಇದೀಗ ಅವರು ಶಿವೈಕ್ಯರಾಗಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದರು. ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. ಅವರು 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ನಾಲ್ವರು ಪುತ್ರಿಯರು, ಮೂವರು ಪುತ್ರರನ್ನು ಅವರು ಅಗಲಿದ್ದಾರೆ.


Share

You cannot copy content of this page