ಸಮಗ್ರ ಸುದ್ದಿ

ಜಿಬಿಎ ಚುನಾವಣೆ; ನಾಳೆಯಿಂದ 369 ವಾರ್ಡ್ ಗಳ ಆಕಾಂಕ್ಷಿಗಳ ಅರ್ಜಿ ಸ್ವೀಕಾರ: ಡಿಸಿಎಂ ಡಿ.ಕೆ. ಶಿವಕುಮಾರ್

Share

ಬೆಂಗಳೂರು : ನಾಳೆಯಿಂದ ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ಸಚಿವರ ಜೊತೆ ಚರ್ಚಿಸಿ ಈ ಅರ್ಜಿ ಜೊತೆಗೆ ಪಡೆಯುವ ಹಣವನ್ನು ಪಕ್ಷದ ಕಟ್ಟಡ ನಿಧಿಗೆ ಬಳಸಲು ತೀರ್ಮಾನಿಸಿದ್ದು, ಸಾಮಾನ್ಯವರ್ಗಕ್ಕೆ 50 ಸಾವಿರ ಹಾಗೂ ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದವರಿಗೆ 25 ಸಾವಿರ ರೂ. ನಿಗದಿಪಡಿಸಲಾಗಿದೆ. ಆನ್ಲೈನ್ ಅರ್ಜಿ ಹಾಕಲು ಅವಕಾಶ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ:

ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಮತ ಕಳ್ಳತನ ವಿರುದ್ಧ ನಾವು ಆರಂಭಿಸಿರುವ ಹೋರಾಟ ಮುಂದುವರಿಯಲಿದೆ. ಪ್ರತಿ ಕ್ಷೇತ್ರದಲ್ಲಿ ನಾವು ಲೀಗಲ್ ಬ್ಯಾಂಕ್ ಸ್ಥಾಪಿಸುತ್ತೇವೆ. ನಮ್ಮ ಪಕ್ಷದ ಪರ ಇರುವ ವಕೀಲರನ್ನು ಇದರಲ್ಲಿ ಸೇರಿಸಲಾಗುವುದು. ಇವರು ನಮ್ಮ ಕಾರ್ಯಕರ್ತರಿಗೆ ಕಾನೂನು ಸಲಹೆ ನೀಡಲಾಗುವುದು.

ಜಿ.ಸಿ.ಚಂದ್ರಶೇಖರ್ ಅವರು ಬಿಎಲ್‌ ಎ ಗುರುತಿನ ಚೀಟಿ ನೀಡಲು ತಯಾರು ಮಾಡಿಕೊಂಡಿದ್ದಾರೆ. ಎಐಸಿಸಿಯಿಂದ ಒಪ್ಪಿಗೆ ಪಡೆಯಲು ತೆಗೆದುಕೊಂಡು ಹೋಗಲಾಗುವುದು. ನಾವು ಇಡೀ ದೇಶದಲ್ಲಿಯೇ ಅತಿ ಹೆಚ್ಚು ಸಹಿ ಸಂಗ್ರಹ ಮಾಡಿದ್ದೇವೆ.

ಜನರ ಉತ್ಸಾಹ ಮುಂದಿನ ಚುನಾವನೆಗಳಿಗೆ ನಾಂದಿ:

ಇಂದಿನ ಪ್ರತಿಭಟನೆಯಲ್ಲಿ ಜನರಲ್ಲಿ ಇದ್ದ ಉತ್ಸಾಹ 2028 ಹಾಗೂ 2029ರ ಚುನಾವಣೆಗೆ ನಾಂದಿಯಾಡಿದೆ. ಈ ದೇಶಕ್ಕೆ ಕಾಂಗ್ರೆಸ್ ಅನಿವಾರ್ಯತೆ ಇದೆ ಎಂದು ಪಕ್ಷ ಉಳಿಸಿಕೊಳ್ಳಲು ಕಾರ್ಯಕರ್ತರು ಸಜ್ಜಾಗಿದ್ದಾರೆ. ಇದರಿಂದ ಸಂತೋಷವಾಗಿದೆ, ನನ್ನ ಆತ್ಮಸ್ಥೈರ್ಯ ಹೆಚ್ಚಿಸಿದೆ. ಅಧಿಕಾರ ಸಿಗದ ಕಾರ್ಯಕರ್ತರು ಕೂಡ ತಮ್ಮ ಹಣದಲ್ಲಿ ಈ ಪ್ರತಿಭಟನೆಗೆ ಆಗಮಿಸಿದ್ದಾರೆ.

ಆಳಂದ ಕ್ಷೇತ್ರದಲ್ಲಿ ಹಳ್ಳಿಗಳಲ್ಲಿ ಹೊರ ರಾಜ್ಯಗಳ ಫೋನ್ ನಂಬರ್ ಬಳಸಿ ಮತದಾರರ ಹೆಸರು ತೆಗೆಸಲಾಗಿದೆ ಎಂದು ತಿಳಿಸಿದರು.

ನನ್ನನ್ನು ನೋಡಿದರೆ ನಮ್ಮ ನಾಯಕರು ಕುಶಲೋಪರಿ ವಿಚಾರಿಸುತ್ತಾರೆ:

ನಮ್ಮ ನಾಯಕರಿಗೆ ನನ್ನನ್ನು ನೋಡಿದ ತಕ್ಷಣ ಅರ್ಥವಾಗುತ್ತದೆ. ನನ್ನ ಕುಶಲೋಪರಿ ವಿಚಾರಿಸುತ್ತಾರೆ. ಇದು ಸೌಹಾರ್ದಯುತ ಭೇಟಿ, ವೈಯಕ್ತಿಕ ಭೇಟಿ ಅಲ್ಲ. ಇದರ ಹೊರತಾಗಿ ಬೇರೆ ವಿಚಾರಗಳನ್ನು ನಿಮ್ಮ ಮುಂದೆ ಬಹಿರಂಗಪಡಿಸಲು ಆಗುವುದಿಲ್ಲ. ಅದರ ಅವಶ್ಯಕತೆ ಇಲ್ಲ ಎಂದರು.


Share

You cannot copy content of this page