ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿಂದು, ವಿಧಾನಸಭೆ ಕಲಾಪದಲ್ಲಿ ಪ್ರಮುಖ ನಾಲ್ಕು ತಿದ್ದುಪಡಿ ವಿಧೇಯಕಗಳನ್ನು ಮಂಡಿಸಲಾಯಿತು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಪರವಾಗಿ 2025ನೇ ಸಾಲಿನ ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ(ತಿದ್ದುಪಡಿ)ವಿಧೇಯಕ, ಬಾಂಬೆ ಸಾರ್ವಜನಿಕ ನ್ಯಾಸ(ಕರ್ನಾಟಕ ತಿದ್ದುಪಡಿ) ವಿಧೇಯಕ, ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ(ತಿದ್ದುಪಡಿ) ವಿಧೇಯಕಗಳನ್ನು ಮಂಡಿಸಿದರು.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು 2025ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ವಿಧೇಯಕಗಳ ಪ್ರಸ್ತಾವವು ಅಂಗೀಕಾರವಾಯಿತು.
