ಸಮಗ್ರ ಸುದ್ದಿ

ಡಿಸೆಂಬರ್ 21 ಪಲ್ಸ್ ಪೋಲಿಯೋ ದಿನ, ತಪ್ಪದೇ ಪೋಲಿಯೋ ಹನಿ ಹಾಕಿಸಿ: ದಿನೇಶ್ ಗುಂಡೂರಾವ್ |ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಗುರಿ

Share

ಬೆಳಗಾವಿ: ಡಿಸೆಂಬರ್ 21ರಂದು ಪಲ್ಸ್ ಪೋಲಿಯೋ ಹಮ್ಮಿಕೊಂಡಿದ್ದು, 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಎಲ್ಲರೂ ಪೋಲಿಯೋ‌ ಲಸಿಕೆ ಹಾಕಿಸಬೇಕು. ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದ ಎಲ್ಲ ಆಸ್ಪತ್ರೆ, ಅಂಗನವಾಡಿ, ಗುಡ್ಡಗಾಡು ಪ್ರದೇಶ, ಇಟ್ಟಿಗೆ ಭಟ್ಟಿ, ಕೊಳಚೆ ಪ್ರದೇಶ, ರೈಲ್ವೆ ಸ್ಟೇಷನ್ ಮುಂತಾದ ಕಡೆಗಳಲ್ಲಿ ಆದ್ಯತೆ ಮೆರೆಗೆ ಲಸಿಕೆ ಹಾಕಲಾಗುವುದು. ಎಲ್ಲ ಸರಕಾರಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮ ನಡೆಸಲಾಗುವುದು ಎಂದರು.

0-5 ವರ್ಷದ ಮಕ್ಕಳಿಗೆ ಕಡ್ಡಾಯ ಲಸಿಕೆ ಹಾಕಿಸಲೇ ಬೇಕು. ಮೊದಲು ಹಾಕಿಸಿದ್ದರೂ ಈ ಬಾರಿಯೂ ಎರಡು ಹನಿ ಲಸಿಕೆ ಹಾಕಿಸಲೇಬೇಕು. ಪೋಲಿಯೋ ಮುಕ್ತ ದೇಶವಾಗಿರುವ ಭಾರತ ಇದನ್ನು ಮುಂದುವರೆಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ಡಿಸೆಂಬರ್ 21 ರಂದು ಬೂತ್ ಗಳಲ್ಲಿ ನಂತರ 2-3 ದಿನ ಮನೆಮನೆಗೆ ತೆರಳಿ 0-5 ವರ್ಷದ ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಸರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.

33258 ಭೂತ್ ಗಳು, 1030 ಸಂಚಾರಿ ತಂಡಗಳು, 1096 ಟ್ರಾನ್ಸಿಟ್ ತಂಡಗಳು, 113115 ಲಸಿಕಾ ಕಾರ್ಯಕರ್ತರು, 7322 ಮೇಲ್ವಿಚಾರಕರನ್ನು ನೇಮಿಸಲಾಗಿದೆ.

Nearby Vaccination centre Karnataka ಆಪ್ ಮೂಲಕ ಹತ್ತಿರದ ಲಸಿಕಾ ಕೇಂದ್ರ ಸಂಪರ್ಕಿಸಬಹುದು. ಪೋಲಿಯೋ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದ್ದು ವದಂತಿಗಳಿಗೆ ಕಿವಿಗೊಡದೆ ಮಕ್ಕಳಿಗೆ ಲಸಿಕೆ ಹಾಕಿಸಿ ಎಂದರು.


Share

You cannot copy content of this page