ಬೆಳಗಾವಿ: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ “ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ”ವನ್ನು ವಿಧಾನ ಪರಿಷತ್ ನಲ್ಲಿ ಅಂಗೀಕರಿಸಲಾಯಿತು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸಿದರು. ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
2025ನೇ ಸಾಲಿನ “ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೆಲವು ಇತರೇ ಕಾನೂನುಗಳ (ತಿದ್ದುಪಡಿ) ವಿಧೇಯಕ”ವನ್ನು ಅಂಗೀಕರಿಸಲಾಯಿತು. ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ, 2025ನ್ನು ವಿಧಾನ ಪರಿಷತ್ ನಲ್ಲಿ ಅಂಗೀಕರಿಸಲಾಯಿತು.
ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸಿದರು. ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
