ಸಮಗ್ರ ಸುದ್ದಿ

ನವನಗರದಲ್ಲಿ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಲು ಪ್ರಸ್ತಾವನೆ: ಡಿಸಿಎಂ ಡಿ.ಕೆ.ಶಿವಕುಮಾರ್

Share

ಬೆಳಗಾವಿ: ಆಲಮಟ್ಟಿ ಜಲಾಶಯದಲ್ಲಿ ಮುಳುಗಡೆಯಾಗಿರುವ ಬಾಗಲಕೋಟೆಯ ಸಣ್ಣ, ದೊಡ್ಡ ಮತ್ತು ಅತೀ ದೊಡ್ಡ ಅಂಗಡಿಗಳ ಮಾಲೀಕರಿಗೆ ನವನಗರದ ಯುನಿಟ್-3ರ ಅನುಮೋದಿತ ನಕ್ಷೆಯಲ್ಲಿನ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಿ, ಪರಿಷ್ಕೃತ ನಕ್ಷೆಗೆ ಅನುಮೋದನೆ ನೀಡುವ ಪ್ರಸ್ತಾವನೆಯನ್ನು ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಸಲ್ಲಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಇಂದು ವಿಧಾನ ಪರಿಷತ್ ನಲ್ಲಿ ಶಾಸಕರಾದ ಪಿ.ಹೆಚ್. ಪೂಜಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುತ್ತಾ, ಪ್ರಸ್ತುತ, ಸದರಿ ಪ್ರಸ್ತಾವನೆಯು ಕರ್ನಾಟಕ ನಗರ & ಗ್ರಾಮಾಂತರ ಯೋಜನಾ ತಿದ್ದುಪಡಿ ಕಾಯಿದೆ ಅನುಸಾರ ಬಾಗಲಕೋಟೆಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಪರಿಶೀಲನಾ ಹಂತದಲ್ಲಿದ್ದು, ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಅನುಮೋದನೆ ನಂತರವೇ ನಿಯಾಮನುಸಾರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.


Share

You cannot copy content of this page