ಸಮಗ್ರ ಸುದ್ದಿ

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ | ಆರೋಗ್ಯ ಸೇವೆಯಿಂದ ವಂಚಿತ ಜನರಿಗೆ ಯೋಜನೆಯಿಂದ ನೆರವು- ಮುಖ್ಯಮಂತ್ರಿ ಸಿದ್ದರಾಮಯ್ಯ

Share

ಬೆಳಗಾವಿ: ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ ಬೆಳಗಾವಿ ಜಿಲ್ಲಾ ಪಂಚಾಯತ್ ಇವರ ವತಿಯಿಂದ ಸುವರ್ಣ ಸೌಧದ ಭವ್ಯ ಮೆಟ್ಟಟಿಲುಗಳ ಮೇಲೆ ಆಯೋಜಿಸಲಾಗಿದ್ದ ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ಗಳಿಗೆ ಚಾಲನೆ ನೀಡಿ ಮಾತನಾಡಿದರು.

ಸಂಪರ್ಕ ರಹಿತ, ದುರ್ಗಮ ಮತ್ತು ಗುಡ್ಡಗಾಡು ಪ್ರದೇಶಗಳ ಜನರ ಮನೆಯ ಬಾಗಿಲಲ್ಲೆ ಆರೋಗ್ಯ ಸೇವೆ ನೀಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಹಿಂದೆ ಆ್ಯಂಬುಲೆನ್ಸ್ ಗಳ ಸೇವೆಗೆ 2.90 ಲಕ್ಷ ರೂ.ಗಳ ವೆಚ್ಚವಾಗುತ್ತಿತ್ತು. ಪ್ರಸ್ತುತ ಆರೋಗ್ಯ ಸೇತುವಿನ ಪ್ರತಿ ಘಟಕಕ್ಕೆ 1.60 ಲಕ್ಷ ರೂ. ವೆಚ್ಚವಾಗಲಿದ್ದು, ಪ್ರತಿ ಘಟಕದಲ್ಲಿ ವೈದ್ಯರು, ಶುಶ್ರೂಷಿಕಿಯರು, ತಂತ್ರಜ್ಞರ ಸೇವೆ ಇರಲಿದ್ದು, ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಗೆ ನೆರವಾಗಲಿದೆ ಎಂದರು.

ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಸರ್ಕಾರದ ಗುರಿ:
ಸಮಾಜದ ಪ್ರತಿಯೊಬ್ಬ ನಾಗರಿಕರಿಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಜಾರಿಗೊಳಿಸಲಾಗಿದೆ. ಆರೋಗ್ಯ ಸೇವೆಗಳಿಂದ ವಂಚಿತರಾಗಿರುವ ಜನರಿಗೆ ಈ ಯೋಜನೆಯಿಂದ ಲಾಭವಾಗಲಿದೆ ಎಂದರು.

ಸಮಾಜದ ಪ್ರತಿಯೊಬ್ಬ ನಾಗರೀಕರಿಗೂ ಗುಣಮಟ್ಟ ಆರೋಗ್ಯ ಸೇವೆ- ಸಚಿವ ದಿನೇಶ್ ಗುಂಡೂರಾವ್

ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್* ಅವರು, ಸಮಾಜದ ಪ್ರತಿಯೊಬ್ಬ ನಾಗರೀಕರಿಗೂ ಗುಣಮಟ್ಟ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ.

ಸಂಪರ್ಕರಹಿತ ಪ್ರದೇಶಗಳು, ದುರ್ಗಮ ಪ್ರದೇಶಗಳು ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಮನೆಯ ಬಾಗಿಲಲ್ಲೇ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ 81 “ಸಂಚಾರಿ ಆರೋಗ್ಯ ಘಟಕ” ಗಳನ್ನು ಪ್ರಾರಂಭಿಸಿದ್ದೇವೆ ಎಂದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 49 ಸಂಚಾರಿ ಆರೋಗ್ಯ ಘಟಕಗಳನ್ನು ಮತ್ತು ರಾಜ್ಯ ಸರ್ಕಾರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅನುದಾನದಡಿಯಲ್ಲಿ 32 ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಗಳಲ್ಲಿ ಅನುಷ್ಟಾನಗೊಳಿಸಲಾಗುವುದು.
ಸಂಚಾರಿ ಆರೋಗ್ಯ ಘಟಕಗಳ ಮೂಲಕ ಪ್ರಾಥಮಿಕ ಆರೋಗ್ಯ ಸೇವೆಗಳು, ಸಮುದಾಯ ಆರೈಕೆ ಸೇವೆಗಳನ್ನು ಒದಗಿಸಲಾಗುವುದು.

ಸಂಚಾರಿ ಆರೋಗ್ಯ ಘಟಕಗಳನ್ನು ಜಿಲ್ಲಾ ಮಟ್ಟದಲ್ಲಿ ಅನುಷ್ಟಾನಗೊಳಿಸಲಾಗುತ್ತಿದ್ದು, ವಾಹನವನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆದಿದ್ದೇವೆ. ಪ್ರತಿ ವಾಹನದಲ್ಲಿ ಒಬ್ಬ ಎಂ.ಬಿ.ಬಿ.ಎಸ್‌ ವೈದ್ಯರುಗಳು, ಶುಶ್ರೂಷಕರು, ತಂತ್ರಜ್ಞರು ಇರುತ್ತಾರೆ.

ಮೊದಲೇ ನಿರ್ಧಿಷ್ಟ ದಿನಾಂಕ ಮತ್ತು ಸಮಯವನ್ನು ತಿಳಿಸಿ, ಅಲ್ಲಿಗೆ ತೆರಳಿ ಸೇವೆಯನ್ನು ಒದಗಿಸಲಾಗುವುದು.
ಪ್ರತಿ ಸಂಚಾರಿ ಆರೋಗ್ಯ ಘಟಕಗಳನ್ನು ಮಾಸಿಕ ರೂ. 1.92 ಲಕ್ಷಗಳ ಮೊತ್ತ ವ್ಯಯಿಸಲಾಗುವುದು. ಉತ್ತರ ಕರ್ನಾಟಕ ಭಾಗಕ್ಕೆ 41 ವಾಹನ ನೀಡಿದ್ದೇವೆ ಎಂದು ಸಚಿವರು ಹೇಳಿದರು.
ಸಮಾಜದ ಪ್ರತಿಯೊಬ್ಬ ನಾಗರೀಕರಿಗೂ ಗುಣಮಟ್ಟ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ.

ಸಂಪರ್ಕರಹಿತ ಪ್ರದೇಶಗಳು, ದುರ್ಗಮ ಪ್ರದೇಶಗಳು ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಮನೆಯ ಬಾಗಿಲಲ್ಲೇ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ 81 “ಸಂಚಾರಿ ಆರೋಗ್ಯ ಘಟಕ” ಗಳನ್ನು ಪ್ರಾರಂಭಿಸಿದ್ದೇವೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 49 ಸಂಚಾರಿ ಆರೋಗ್ಯ ಘಟಕಗಳನ್ನು ಮತ್ತು ರಾಜ್ಯ ಸರ್ಕಾರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅನುದಾನದಡಿಯಲ್ಲಿ 32 ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಗಳಲ್ಲಿ ಅನುಷ್ಟಾನಗೊಳಿಸಲಾಗುವುದು.
ಸಂಚಾರಿ ಆರೋಗ್ಯ ಘಟಕಗಳ ಮೂಲಕ ಪ್ರಾಥಮಿಕ ಆರೋಗ್ಯ ಸೇವೆಗಳು, ಸಮುದಾಯ ಆರೈಕೆ ಸೇವೆಗಳನ್ನು ಒದಗಿಸಲಾಗುವುದು.

ಸಂಚಾರಿ ಆರೋಗ್ಯ ಘಟಕಗಳನ್ನು ಜಿಲ್ಲಾ ಮಟ್ಟದಲ್ಲಿ ಅನುಷ್ಟಾನಗೊಳಿಸಲಾಗುತ್ತಿದ್ದು, ವಾಹನವನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆದಿದ್ದೇವೆ. ಪ್ರತಿ ವಾಹನದಲ್ಲಿ ಒಬ್ಬ ಎಂ.ಬಿ.ಬಿ.ಎಸ್‌ ವೈದ್ಯರುಗಳು, ಶುಶ್ರೂಷಕರು, ತಂತ್ರಜ್ಞರು ಇರುತ್ತಾರೆ.

ಮೊದಲೇ ನಿರ್ಧಿಷ್ಟ ದಿನಾಂಕ ಮತ್ತು ಸಮಯವನ್ನು ತಿಳಿಸಿ, ಅಲ್ಲಿಗೆ ತೆರಳಿ ಸೇವೆಯನ್ನು ಒದಗಿಸಲಾಗುವುದು.
ಪ್ರತಿ ಸಂಚಾರಿ ಆರೋಗ್ಯ ಘಟಕಗಳನ್ನು ಮಾಸಿಕ ರೂ. 1.92 ಲಕ್ಷಗಳ ಮೊತ್ತ ವ್ಯಯಿಸಲಾಗುವುದು. ಉತ್ತರ ಕರ್ನಾಟಕ ಭಾಗಕ್ಕೆ 41 ವಾಹನ ನೀಡಿದ್ದೇವೆ ಎಂದು ಸಚಿವರು ಹೇಳಿದರು.

Share

You cannot copy content of this page