ಸಮಗ್ರ ಸುದ್ದಿ

ರವೀಂದ್ರ ಕಲಾಕ್ಷೇತ್ರದಲ್ಲಿ ನಾಳೆ ಬೆಳಗ್ಗೆ 7.30ರಿಂದ 10.30 ಸಾರ್ವಜನಿಕ ದರ್ಶನ| ಕಲಾಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ: ಈಶ್ವರ ಖಂಡ್ರೆ

Share


ಬೆಂಗಳೂರು, ನ.14: ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತರಾದ ನಾಡೋಜ ಸಾಲುಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.


ಮರಗಳನ್ನೇ ಮಕ್ಕಳಂತೆ ಸಲಹಿ, ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕನವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಗ್ಗೆ 7.30ರಿಂದ 10.30 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು, ನಂತರ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.


ಸಾಮಾಜಿಕ ಜಾಲ ತಾಣಗಳಲ್ಲಿ ಸರ್ಕಾರಿ ಆದೇಶವೊಂದು ಹರಿದಾಡುತ್ತಿದ್ದು ಇದು ನಕಲಿ ಆಗಿರುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿರುತ್ತಾರೆ.


Share

You cannot copy content of this page