ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ, ಪರಿಸರವಾದಿ “ಹಸಿರೆ ಉಸಿರು” ಎಂದು ಜೀವಿಸಿದ್ದ ವೃಕ್ಷಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ಮನಸ್ಸಿಗೆ ಅತೀವ ನೋವು ತಂದಿದೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.
ಹಸಿರಿಲ್ಲದೆ ಬದುಕಿಲ್ಲ ಎಂದು ಜಗತ್ತಿಗೆ ತೋರಿಸಿಕೊಟ್ಟ ಮಾನವತಾವಾದಿ, ಮರಗಳನ್ನು ತಮ್ಮ ಮಕ್ಕಳಂತೆ ಪೋಷಿಸಿ ಬೆಳೆಸಿ ಪರಿಸರ ಸಂರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಅವರ ಪರಿಸರ ಸೇವೆ ಇಡೀ ಮನುಕುಲಕ್ಕೆ ಮಾದರಿ.
ತಿಮ್ಮಕ್ಕನವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
