ಬೆಂಗಳೂರು, ನ. 15 : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 13.65 ಕೋಟಿ ಅಂದಾಜು ಮೌಲ್ಯದ ಒಟ್ಟು 2 ಎಕರೆ 0.03.08 ಗುಂಟೆ ಸರ್ಕಾರಿ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಅವರು ತಿಳಿಸಿದ್ದಾರೆ.
ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗುಂಡುತೋಪು, ರಾಜಕಾಲುವೆ, ಸ್ಮಶಾನ, ಖರಾಬು, ತೋಪು, ಗೋಮಾಳ & ರಸ್ತೆ, ಹುಲ್ಲುಬನ್ನಿ, ಸರ್ಕಾರಿ ಮತ್ತು ಸರ್ಕಾರಿ ಗೋಮಾಳ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಬೆಂಗಳೂರು ಪೂರ್ವ ತಾಲ್ಲೂಕಿನ ವರ್ತೂರು ಹೋಬಳಿಯ ಮುಳ್ಳೂರು ಗ್ರಾಮದ ಸ.ನಂ 23 ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.02 ಗುಂಟೆಗಳಾಗಿದ್ದು, ಅಂದಾಜು ಮೌಲ್ಯದ ರೂ.0.50 ಲಕ್ಷಗಳಾಗಿರುತ್ತದೆ. ವರ್ತೂರು ಹೋಬಳಿಯ ಕೊಡತಿ ಗ್ರಾಮದ ಸ.ನಂ. 129/2ರ ರಾಜಕಾಲುವೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.02 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ.0.80 ಲಕ್ಷಗಳಾಗಿರುತ್ತದೆ.
ವರ್ತೂರು ಹೋಬಳಿಯ ಕೊಡತಿ ಗ್ರಾಮದ ಸ.ನಂ. 122/2,3,4,5,6,7,8 ರ ರಾಜಕಾಲುವೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ.2.00ಕೋಟಿ ಗಳಾಗಿರುತ್ತದೆ. ವರ್ತೂರು ಹೋಬಳಿಯ ವರ್ತೂರು ಗ್ರಾಮದ ಸ.ನಂ. 36 ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ.2.00 ಕೋಟಿ ಗಳಾಗಿರುತ್ತದೆ. ಕೆ.ಆರ್.ಪುರ ಹೋಬಳಿಯ ಹೂಡಿ ಗ್ರಾಮದ ಸ.ನಂ. 07 ರ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04.08 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ.3.50 ಕೋಟಿಗಳಾಗಿರುತ್ತದೆ.
ಆನೇಕಲ್ ತಾಲ್ಲೂಕಿನ ಕಸಬಾ ಹೋಬಳಿಯ ವಣಕನಹಳ್ಳಿ ಗ್ರಾಮದ ಸ.ನಂ. 08 ರ ತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.06 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ.0.10 ಲಕ್ಷಗಳಾಗಿರುತ್ತದೆ. ಜಿಗಣಿ ಹೋಬಳಿಯ ಮಹಾಂತಲಿಂಗಾಪುರ ಗ್ರಾಮದ ಸ.ನಂ. 56 ರ ಗೋಮಾಳ & ರಸ್ತೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ.0.10 ಲಕ್ಷಗಳಾಗಿರುತ್ತದೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಹೋಬಳಿಯ ಚೋಳನಾಯಕನಹಳ್ಳಿ ಗ್ರಾಮದ ಸ.ನಂ 91 ರ ಹುಲ್ಲುಬನ್ನಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.40 ಲಕ್ಷಗಳಾಗಿರುತ್ತದೆ. ಕೆಂಗೇರಿ ಹೋಬಳಿಯ ಕುಂಬಳಗೋಡು ಗ್ರಾಮದ ಸ.ನಂ 79/1ರ ಸರ್ಕಾರಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.32 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.3.25 ಕೋಟಿಗಳಾಗಿರುತ್ತದೆ.
ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಹೋಬಳಿಯ ಜಕ್ಕೂರು ಗ್ರಾಮದ ಸ.ನಂ 99 ರ ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.02 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.1.00 ಕೋಟಿಗಳಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
