ಸಮಗ್ರ ಸುದ್ದಿ

ಕೋಗಿಲು ತ್ಯಾಜ್ಯ ವಿಲೇವಾರಿ ಜಾಗ ಒತ್ತುವರಿ ತೆರವು: ಮನೆ ಇಲ್ಲದ ಅರ್ಹರಿಗೆ ಮುಖ್ಯ ಮಂತ್ರಿಗಳ 1 ಲಕ್ಷ ವಸತಿ ಯೋಜನೆಯಲ್ಲಿ ಮನೆ- ಡಿಸಿಎಂ ಡಿ.ಕೆ.ಶಿವಕುಮಾರ್

Share

ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಅನೇಕರು ತಮಗೆ ಬೇರೆ ಕಡೆ ಮನೆಗಳಿದ್ದರೂ ಇಲ್ಲಿ ಗುಡಿಸಲು ಹಾಕಿಕೊಂಡಿದ್ದರು. ಉದ್ಯೋಗ ಅರಸಿ ಬಂದು ಇಲ್ಲಿ ವಾಸವಾಗಿದ್ದಾರೆ. ಯಾರಿಗೆ ನಿಜವಾಗಿಯೂ ವಾಸಕ್ಕೆ ಮನೆ ಇಲ್ಲವೊ ಅವರಿಗೆ ಮುಖ್ಯಮಂತ್ರಿಗಳ 1 ಲಕ್ಷ ವಸತಿ ಯೋಜನೆಯಲ್ಲಿ ಮನೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಇದಕ್ಕೆ ಅವರು ಒಂದೂವರೆಯಿಂದ ಎರಡು ಲಕ್ಷ ಹಣ ಪಾವತಿಸಬೇಕು. ಇದಕ್ಕೆ ಸಾಲ ಸೌಲಭ್ಯ ಕಲ್ಪಿಸುವ ಜವಾಬ್ದಾರಿಯನ್ನು ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ವಹಿಸಲಾಗಿದೆ. ನಾವು ಮನೆ ನೀಡುವ ಮುನ್ನ, ಅವರು ಯಾರು, ಎಲ್ಲಿಂದ ಬಂದಿದ್ದಾರೆ, ಆಧಾರ್ ಹಾಗೂ ಇತರೆ ದಾಖಲೆ ಪರಿಶೀಲಿಸುತ್ತೇವೆ. ಅಲ್ಲಿಯವರೆಗೆ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು. ಮಾನವೀಯತೆ ದೃಷ್ಟಿಯಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು.

ಕೆ.ಸಿ. ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

ವೇಣುಗೋಪಾಲ್ ಅವರು ನಮ್ಮ ನಾಯಕರು, ನಮಗೆ ಸಲಹೆ ನೀಡುವ ಎಲ್ಲಾ ಅಧಿಕಾರ ಅವರಿಗಿದೆ. ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮಲ್ಲಿ ರಾಷ್ಟ್ರೀಯ ನಾಯಕರು ಸಲಹೆ ನೀಡುತ್ತಾರೆ. ಈ ಹಿಂದೆಯೂ ಅನೇಕ ಸಲಹೆ ನೀಡಿದ್ದಾರೆ, ಈಗಲೂ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ ಎಂದು ತಿಳಿಸಿದರು.


Share

You cannot copy content of this page