ಸಮಗ್ರ ಸುದ್ದಿ

ಯಲಹಂಕ ಕೋಗಿಲು ಬಡಾವಣೆಯ ಅರ್ಹ ಸಂತ್ರಸ್ತರಿಗೆ ಜನವರಿ 2 ಕ್ಕೆ ಮನೆಗಳ ವಿತರಣೆ

Share

ಬೆಂಗಳೂರು : ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಬಿಬಿಎಂಪಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಪರ್ಯಾಯವಾಗಿ ಶಾಶ್ವತ ವಸತಿ ವ್ಯವಸ್ಥೆ ಮಾಡಿಕೊಡುವ ಬಗ್ಗೆ ದಾಖಲೆ ಪರಿಶೀಲನೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಜನವರಿ ಒಂದರಂದು ಉದ್ದೇಶಿಸಲಾಗಿದ್ದ ಮನೆಗಳ ವಿತರಣೆ ಜನವರಿ 2 ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಈ ವಿಚಾರದಲ್ಲಿ ಅರ್ಹ ರಿಗೆ ಮಾತ್ರ ವಸತಿ ವ್ಯವಸ್ಥೆ ಮಾಡಿಕೊಡುವುದು ಸರ್ಕಾರದ ಉದ್ದೇಶ. ಹೀಗಾಗಿ ತರಾತುರಿ ಮಾಡದೆ ಸಮಗ್ರವಾಗಿ ದಾಖಲೆ ಪರಿಶೀಲನೆ ಮಾಡಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದು, ಕಂದಾಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಆ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share

You cannot copy content of this page