ಬೆಂಗಳೂರು : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ – ಸಿಬಿಎಸ್ ಇ 10 ಹಾಗೂ 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ ಪರಿಷ್ಕೃತ ದಿನಾಂಕಗಳನ್ನು ಪ್ರಕಟಿಸಿದೆ.
ಈ ಮೊದಲು 2026ರ ಮಾರ್ಚ್ 3ರಂದು ನಿಗದಿಯಾಗಿದ್ದ 10ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆಯನ್ನು 2026 ರ ಮಾರ್ಚ್ 11 ರಂದು ನಡೆಸಲಾಗುವುದು ಎಂದು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.
12ನೇ ತರಗತಿಯ ಪರೀಕ್ಷೆಯ ದಿನಾಂಕವನ್ನು ಏಪ್ರಿಲ್ 10ಕ್ಕೆ ಬದಲಾಯಿಸಲಾಗಿದೆ. ಈ ಪರೀಕ್ಷೆ 2026ರ ಮಾರ್ಚ್ 3ರಂದು ನಿಗದಿಯಾಗಿತ್ತು. ಆಡಳಿತಾತ್ಮಕ ಕಾರಣಗಳಿಂದಾಗಿ ಪರೀಕ್ಷಾ ದಿನಾಂಕಗಳನ್ನು ಪರಿಷ್ಕರಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.
ಸಿಬಿಎಸ್ ಇ ಶಾಲೆಗಳು ಈ ಮಾಹಿತಿಯನ್ನು ಸಂಬಂಧಪಟ್ಟ ಎಲ್ಲಾ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ತಿಳಿಸುವಂತೆ ಕೋರಿದೆ.
