ಸಮಗ್ರ ಸುದ್ದಿ

ಬಳ್ಳಾರಿಯಲ್ಲಿ ನಡೆದ ಗುಂಪು ಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸೂಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

Share

ಬೆಂಗಳೂರು : ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅವರು, ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪು ಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರನ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ.

ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ. ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಹೋಗಿ ರಾಜಶೇಖರ ಅವರಿಗೆ ತಗುಲಿರಬಹುದು, ಆದ್ದರಿಂದ ಈ ಬಗ್ಗೆ ತನಿಖೆ ನಡೆಯಬೇಕಿದೆ ಎಂದರು.


Share

You cannot copy content of this page