ಬೆಂಗಳೂರು, ನ.18: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ (Non Kalyana Karnataka) ಮತ್ತು ಸ್ಥಳೀಯ ವೃಂದದ (Kalyana Karnataka) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ (Non Kalyana Karnataka) ಮತ್ತು ಕಲ್ಯಾಣ ಕರ್ನಾಟಕ ವೃಂದದ (Kalyana Karnataka) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಆನ್-ಲೈನ್ ಮುಖಾಂತರ ಅರ್ಜಿ ಸಲ್ಲಿಸುವಿಕೆಯು ನವೆಂಬರ್ 17 ರಿಂದ ಪ್ರಾರಂಭವಾಗಿದ್ದು, ನವೆಂಬರ್ 25 ಅರ್ಜಿ ಸಲ್ಲಿಸುವಿಕೆಗೆ ಕೊನೆಯ ದಿನಾಂಕವಾಗಿದೆ. ಶುಲ್ಕವನ್ನು ಪಾವತಿ ಮಾಡಲು ನವೆಂಬರ್ 26 ಕೊನೆಯ ದಿನಾಂಕವಾಗಿರುತ್ತದೆ.
ನೇಮಕಾತಿಯ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea ನಲ್ಲಿ ವೀಕ್ಷಿಸಬಹುದಾಗಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
