ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಶುಚಿತ್ವ ಹೊಂದಿರದ 10 ಪೇಯಿಂಗ್ ಗೆಸ್ಟ್ ವಸತಿ ಗೃಹಗಳ ಅಡುಗೆ ಕೋಣೆಗಳು ಶುಚಿತ್ವ ಇಲ್ಲದೇ ನಡೆಸುತ್ತಿರುವ ಹಿನ್ನಲೆಯಲ್ಲಿ ಬೀಗ ಮುದ್ರೆ ಹಾಕಲಾಗಿದೆ.
ಈ ದಿನ ತಪಾಸಣೆ ನಡೆಸಿದ ಪಿ.ಜಿ. ಉದ್ದಿಮೆಗಳಲ್ಲಿ ಕಂಡು ಬಂದ ನ್ಯೂನ್ಯತೆಗಳಿಗೆ ಒಟ್ಟು ರೂ.22,500/- ಗಳ ದಂಡವನ್ನು ವಿಧಿಸಲಾಗಿದೆ.
ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಆಯುಕ್ತರ ಆದೇಶದಂತೆ ಇಂದು ಜಯನಗರ, ಬೆಂಗಳೂರು ದಕ್ಷಿಣ, ಬಿಟಿಎಂ ಲೇಔಟ್ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಪೇಯಿಂಗ್ ಗೆಸ್ಟ್ ವಸತಿ ಗೃಹಗಳಲ್ಲಿ ಶುದ್ಧ ಕುಡಿಯುವ ನೀರು, ಶುಚಿತ್ವ, ಅಡುಗೆ ಕೋಣೆ ನೈರ್ಮಲ್ಯ, ಸುರಕ್ಷತೆ, ಉತ್ತಮ ಶೌಚಾಲಯ ವ್ಯವಸ್ಥೆ, ಅಗ್ನಿಶಾಮಕ ಸಾಧನಗಳು ಹಾಗೂ ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಕೆ ಮತ್ತು FSSAI ನ ಆಹಾರ ಸುರಕ್ಷತಾ ಪ್ರಮಾಣ ಪತ್ರ ಇತ್ಯಾದಿ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಒಟ್ಟು 66 ಪೇಯಿಂಗ್ ಗೆಸ್ಟ್ ವಸತಿಗೃಹ ಉದ್ದಿಮೆಗಳನ್ನು ತಪಾಸಣೆ ನಡೆಸಲಾಗಿರುತ್ತದೆ.
ಪಿ.ಜಿ. ಗಳನ್ನು ನಡೆಸುತ್ತಿರುವವರಿಗೆ ತಿಳುವಳಿಕೆ ಪತ್ರಗಳನ್ನು ಜಾರಿ ಮಾಡಲಾಗಿದ್ದು, ಉದ್ದಿಮೆದಾರರು ಏಳು ದಿನಗಳ ಒಳಗಾಗಿ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು, ಕಾರ್ಯನಿರ್ವಹಣೆ ಮಾಡುವುದಕ್ಕೆ ಸೂಚಿಸಲಾಗಿತ್ತು.
