ಸಮಗ್ರ ಸುದ್ದಿ

ಅಂತರಾಷ್ಟ್ರೀಯ ವಾಣಿಜ್ಯ ಮೇಳ ಉತ್ಪಾದನೋತರ ಕೃಷಿ -2026 ವ್ಯವಸ್ಥಿತ ಆಯೋಜನೆಗೆ ಸೂಚನೆ

Share

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಫೆಬ್ರವರಿ 6 ರಿಂದ 8 ರವರೆಗೆ ನಡೆಯುವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಉತ್ಪಾದನೋತರ ಕೃಷಿ-2026 ಮೇಳದಲ್ಲಿ ಯಾವುದೇ ವ್ಯತ್ಯಾಸಗಳಾಗದಂತೆ ಅಚ್ಚುಕಟ್ಟಾಗಿ ಆಯೋಜಿಸುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಕಾಸಸೌಧ ಕಚೇರಿಯಲ್ಲಿ ಇಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳದ ಪೂರ್ವ ಭಾವಿ ಸಿದ್ದತೆ ಸಭೆ ನಡೆಸಿದ ಸಚಿವರು ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಮೇಳದ‌ ಉದ್ಘಾಟನೆ, ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ, ಕೇಂದ್ರ ಸರ್ಕಾರದ ಹಲವು ಸಚಿವರು ಹಾಗೂ ರಾಜ್ಯದ ಸಚಿವರು ಪಾಲ್ಗೊಳ್ಳಲಿದ್ದು ಶಿಷ್ಟಾಚಾರದಲ್ಲಿ ಯಾವುದೇ ಲೋಪ ಉಂಟಾಗದಂತೆ ಗಮನಹರಿಸುಲು ಎನ್. ಚಲುವರಾಯಸ್ವಾಮಿ ಸೂಚಿಸಿದರು.

ಈ ಭಾರಿಯ ಮೇಳ ವಿಶೇಷವಾಗಿರುವಂತೆ ಸೂಚನೆ ನೀಡಿದ ಸಚಿವರು 121 ಮಂದಿ ರೈತರಿಗೆ ಕೃಷಿ ಪಂಡಿತ ಪ್ರಶಸ್ತಿ ಕೊಡುವುದರ ಜೊತೆಗೆ ಮೇಳಕ್ಕೆ ಮುಂಚಿತವಾಗಿ ಅಗ್ರಿ ರನ್, ಮರೆತುಹೋದ ಖಾದ್ಯಗಳ ಪರಿಚಯ, ಹಾಗೂ ಬೆಂಗಳೂರಿನ ಆಯ್ದ ಕಾಲೇಜುಗಳಲ್ಲಿ ಸಿರಿಧಾನ್ಯದಿಂದ ತಯಾರಿಸುವ ಖಾದ್ಯಗಳ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಸಿರಿಧಾನ್ಯ ಬಳಕೆ ಹಾಗೂ ಉತ್ಪಾದನೆ ಉತ್ತೇಜಿಸುವ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೇಶ ವಿದೇಶದ ವಿಜ್ಞಾನಿಗಳು ,ತಜ್ಞರು, ಗಣ್ಯರು ಇದರಲ್ಲಿ ಪಾಲ್ಗೊಳ್ಳುವುದರಿಂದ ಎಲ್ಲಾ ಕಾರ್ಯಕ್ರಮಗಳು ಗುಣಾತ್ಮಕವಾಗಿ ಹಾಗೂ ರಚನಾತ್ಮಕವಾಗಿರಲಿ, ರೈತ ಸ್ನೇಹಿ, ಗ್ರಾಹಕ ಸ್ನೇಹಿ ವಾತಾವರಣ ಸೃಷ್ಟಿ ಮಾಡಿ. ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಒದಗಿಸಿ ಎಂದು ಸಚಿವರು ನಿರ್ದೇಶನ‌ ನೀಡಿದರು.

ಸಿರಿಧಾನ್ಯಗಳ ಕೃಷಿ, ಅದರ ಉತ್ಪನ್ನಗಳ‌
ಮೌಲ್ಯ ವರ್ಧನೆ, ವಿಭಿನ್ನ ಖಾದ್ಯ ತಯಾರಿಕೆ ಬಗ್ಗೆ ರೈತರಿಗೆ , ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ದೊರೆಯುವಂತೆ ಮಾಡಿ ಪ್ರಾತ್ಯಕ್ಷಿಕೆ, ವಿಚಾರ ಸಂಕಿರಣಗಳನ್ನು ಏರ್ಪಡಿಸಿ ಎಂದು ಸೂಚಿಸಿದರು.

ಮೇಳದ ಯಶಸ್ವಿ ಸಂಘನೆಗೆ ರಚಿಸಿಲಾಗಿರುವ ಉಪ ಸಮಿತಿಗಳು ಹೆಚ್ಚಿನ ಜವಾಬ್ದಾರಿ ವಹಿಸಿ, ಬೆಂಗಳೂರಿಗೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಜಿಲ್ಲೆಗಳಲ್ಲಿಯೂ ಪ್ರಚಾರ ಕೈಗೊಳ್ಳಬೇಕು, ಗ್ರಾಮಿಣ ರೈತರಿಗೆ ಇದರಲ್ಲಿ ಭಾಗವಹಿಸಲು ಸೂಕ್ತ ವ್ಯವಸ್ಥೆ ಮಾಡಿ ಸೌಲಭ್ಯ ಕಲ್ಪಿಸಬೇಕು ಎಂದು ಅವರು ಹೇಳಿದರು.

ಕೃಷಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್ ಅವರೂ ಸಹ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಯು.ಪಿ.ಸಿಂಗ್, ಕೃಷಿ ಇಲಾಖೆ ನಿರ್ದೇಶಕ ಡಾ ಜಿ.ಟಿ ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಬಂಥನಾಳ್, ಸೆಕಂಡರಿ ಅಗ್ರಿಕಲ್ಚರಲ್ ನಿರ್ದೇಶಕ ವೆಂಕಟರಮಣ ರೆಡ್ಡಿ, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.


Share

You cannot copy content of this page