ಬೆಂಗಳೂರು : ಹದಿನಾರನೇ ವಿಧಾನಸಭೆಯ ಒಂಭತ್ತನೇ ಅಧಿವೇಶನವು 2026 ರ ಜನವರಿ 22 ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ.
ಅಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನ ಮಂಡಲದ ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
