ರಾಜಕೀಯ

ನರೇಗಾ ಹೆಸರು ಬದಲಾವಣೆ ವಿರೋಧಿಸಿ ಪ್ರತಿ ಕ್ಷೇತ್ರದಲ್ಲಿ ಐದು ಕಿ.ಮೀ. ಪಾದಯಾತ್ರೆ: ಡಿಸಿಎಂ ಡಿ.ಕೆ. ಶಿವಕುಮಾರ್

Share

ದೆಹಲಿ: ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಪ್ರತಿ ಕ್ಷೇತ್ರದಲ್ಲಿಯೂ ಐದು ಕಿ.ಮೀ. ಪಾದಯಾತ್ರೆ ನಡೆಸಲಾಗುವುದು. ಪಂಚಾಯತಿ ಮಟ್ಟದಲ್ಲಿ ರೆಸಲ್ಯೂಷನ್ ಹೊರಡಿಸಲಾಗುವುದು ಹಾಗೂ ಸಭೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಪಿಸಿಸಿ ಅಧ್ಯಕ್ಷರುಗಳ ಸಭೆ ಕರೆಯಲಾಗಿತ್ತು. ನಾನು ಸಹ ಸಭೆಯಲ್ಲಿ ಪಾಲ್ಗೊಂಡಿದ್ದೆ. ಸಚಿವರಾದ ಪ್ರಿಯಾಂಕ್ ಖರ್ಗೆ ಅವರೂ ಭಾಗವಹಿಸಿದ್ದರು. ಪಾದಯಾತ್ರೆ ವಿಚಾರ ಹಾಗೂ ಹೋರಾಟ ಮಾದರಿ ಬಗ್ಗೆ ಈ ಮೊದಲೇ ತಿಳಿಸಲಾಗಿತ್ತು. ಇಂದಿನ ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಸಭೆಯಲ್ಲಿ ನೀಡಿದ ಆದೇಶಗಳನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ನಾವು ಹೋರಾಟ ಮಾಡುತ್ತೇವೆ. ಈಗಾಗಲೇ ಪಂಚಾಯತಿ ಸದಸ್ಯರುಗಳ ಸಭೆ ನಡೆಸಲಾಗಿದೆ. ಶಾಸಕರ, ವಿಧಾನಪರಿಷತ್ ಸದಸ್ಯರ, ಪಕ್ಷದ ಪದಾಧಿಕಾರಿಗಳ, ಸಂಸದರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆಸಲಾಗಿದೆ. ಸಂಘಟನಾ ಕಾರ್ಯದರ್ಶಿಯವರು, ಉಸ್ತುವಾರಿಗಳು ರಾಜ್ಯಕ್ಕೆ ಭೇಟಿ ನೀಡುವ ಸೂಚನೆ ನೀಡಿದ್ದಾರೆ ಎಂದರು.


Share

You cannot copy content of this page