ಬೆಂಗಳೂರು: ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಗೆ ಸಂಬಂಧಿಸಿದಂತೆ 2026 ಹಾಗೂ 2027ನೆ ಸಾಲಿನ ಆಯವ್ಯಯ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವ ಸಭೆ ನಡೆಸಿದರು.
ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಿರುವ ಇಲಾಖೆಗೆ ಸಂಬಂಧಿಸಿದಂತೆ ಮತ್ತಷ್ಟು ಹೊಸ ಯೋಜನೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಮಾಹಿತಿ ಹಾಗೂ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಎನ್.ಮಂಜುಳ, ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ರಾಹಲ್ ಶರಣಪ್ಪ ಸಂಕನೂರ್ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.
