ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆಯ 2026-27ನೇ ಸಾಲಿನ ಆಯವ್ಯಯ ಸಿದ್ಧಪಡಿಸುವ ಪ್ರಕ್ರಿಯೆ ಹಂತದಲ್ಲಿದ್ದು, ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ನಾಗರಿಕರು, ನಾಗರಿಕ ಸಂಘಟನೆಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (RWA), ಪರಿಸರ ಕಾರ್ಯಕರ್ತರು ಮತ್ತು ಸ್ವಯಂಸೇವಾ ಸಂಸ್ಥೆಗಳು (NGO) ನಗರ ಪಾಲಿಕೆಯ ಆಯವ್ಯಯಕ್ಕೆ ಸಂಬಂಧಿಸಿದಂತೆ ತಮ್ಮ ಅಮೂಲ್ಯ ಸಲಹೆಗಳನ್ನು ಸಲ್ಲಿಸುವಂತೆ ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್ ರವರು ಮನವಿ ಮಾಡಿದರು.
ಪೂರ್ವ ನಗರ ಪಾಲಿಕೆಯ ಮೂಲ ಸೌಕರ್ಯ ಅಭಿವೃದ್ಧಿ, ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆ, ಪರಿಸರ ಸಂರಕ್ಷಣೆ, ಸಾಮಾಜಿಕ ಕಲ್ಯಾಣ ಹಾಗೂ ಪಾರದರ್ಶಕ ಆಡಳಿತ, ನಾಗರಿಕರ ಅಗತ್ಯತೆಗಳಿಗೆ ಸ್ಪಂದಿಸುವ ಯೋಜನೆಗಳಿಗೆ ಆದ್ಯತೆ ನೀಡುವುದು ನಮ್ಮ ಮೂಲ ಧೇಯ್ಯವಾಗಿರುವ ಹಿನ್ನೆಲೆಯಲ್ಲಿ ಪೂರ್ವ ನಗರ ಪಾಲಿಕೆಯಲ್ಲಿ ಸಮಗ್ರ ಮತ್ತು ಸುಸ್ಥಿರ ನಗರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಸಿದ್ಧಪಡಿಸಲು ತಮ್ಮ ಅಮೂಲ್ಯ ಸಲಹೆಗಳನ್ನು ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಸಾರ್ವಜನಿಕರು 2026-27ನೇ ಸಾಲಿನ ಆಯವ್ಯಯಕ್ಕೆ ಸಂಬಂಧಿಸಿದ ತಮ್ಮ ಅಮೂಲ್ಯ ಸಲಹೆಗಳನ್ನು ನೀಡಬಯಸಿದ್ದಲ್ಲಿ ಖುದ್ದಾಗಿ *ಉಪ ನಿಯಂತ್ರಕರು (ಹಣಕಾಸು), ಬೆಂಗಳೂರು ಪೂರ್ವ ನಗರ ಪಾಲಿಕೆ. ವಾಣಿಜ್ಯ ಸಂಕೀರ್ಣ. ನೆಲಮಹಡಿ, ಫೀನಿಕ್ಸ್ ಮಾಲ್ ಎದುರು. ಆರ್.ಹೆಚ್.ಬಿ ಕಾಲೋನಿ ಮಹದೇವಪುರ ಬೆಂಗಳೂರು-48 ಕಛೇರಿಯಲ್ಲಿನ ಸಲಹಾ ಪೆಟ್ಟಿಗೆಗೆ ಅಥವಾ acfmahadevapura@gmail.com ಇ-ಮೇಲ್ ವಿಳಾಸಕ್ಕೆ ಪ್ರಕಟಣೆ ಹೊರಡಿಸಿದ 7 ದಿನಗೊಳಗಾಗಿ ಸಲ್ಲಿಸಬಹುದಾಗಿರುತ್ತದೆ.
