ಬೆಂಗಳೂರು: ಬೆಂಗಳೂರು ನಗರದಲ್ಲಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜನವರಿ 26 ರಂದು ನಡೆಯಲಿರುವ ರಾಜ್ಯ ಮಟ್ಟದ 77ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಿಸಲು ಸಾರ್ವಜನಿಕರಿಗೆ E-Pass ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಅವರು ತಿಳಿಸಿದ್ದಾರೆ.
ಆಸಕ್ತರು ಸೇವಾ ಸಿಂಧು ವೆಬ್ ಸೈಟ್ www.sevasindhu.karnataka.gov.in ನಲ್ಲಿ ಜನವರಿ 24, 2026 ರ ಸಂಜೆ 5.00 ಗಂಟೆಯೊಳಗೆ ಸೇವಾ ಸಿಂಧು ವೆಬ್ ಸೈಟ್ ನಲ್ಲಿ ಅಗತ್ಯವಿರುವ ಎಲ್ಲ ವೈಯಕ್ತಿಕ ವಿವರಗಳನ್ನು ನಮೂದಿಸಿ ಇ-ಪಾಸ್ ಗಳನ್ನು ಪಡೆಯಬಹುದು.
ಇ-ಪಾಸ್ ಗಳನ್ನು ಹೊಂದಿರುವವರು ಪರೇಡ್ ಮೈದಾನದ ಪ್ರವೇಶ ದ್ವಾರ ಸಂಖ್ಯೆ : 05 ರಲ್ಲಿ ಪರಿಶೀಲನೆಗಾಗಿ ಇ-ಪಾಸ್ ನ ಮುದ್ರಿತ ಪ್ರತಿಯನ್ನು ಅಥವಾ ಡಿಜಿಟಲ್ (ಮೊಬೈಲ್ ) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು.
ಇ-ಪಾಸ್ ನೋಂದಣಿ ಪ್ರಕ್ರಿಯೆ ಕುರಿತು ಸಹಾಯಕ್ಕಾಗಿ ಸೇವಾ ಸಿಂಧು ವೈಬ್ ಸೈಟ್ ನಲ್ಲಿ ಸಹಾಯ ವಿಭಾಗವನ್ನು ವಿಕ್ಷೀಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
