ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ಅವರು ಇಂದು ನಗರದ ಮಾಣಿಕ್ ಷಾ ಪರೇಡ್ ಗ್ರೌಂಡ್ ಗೆ ಭೇಟಿ ನೀಡಿ ಇದೇ ಜನವರಿ 26 ರಂದು ನಡೆಯುವ ರಾಜ್ಯಮಟ್ಟದ ಗಣರಾಜ್ಯೋತ್ಸವದ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು
ರಾಜ್ಯ ಮಟ್ಟದದಲ್ಲಿ ನಡೆಯುವ ಈ ಸಮಾರಂಭಕ್ಕೆ ಯಾವುದೇ ರೀತಿಯಲ್ಲಿ ಲೋಪದೋಷಗಳಾಗದಂತೆ ನೋಡಿಕೊಂಡು ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ಗ್ರೌಂಡ್ ನಲ್ಲಿ ಧೂಳು ಹರಡದಂತೆ ಗ್ರೌಂಡ್ ಗೆ ನೀರು ಹಾಕಿ ರೂಲರ್ ಹಾಯಿಸಿ ಸಮತಟ್ಟಗೊಳಿಸಿದ್ದು, ಮೈದಾನದಲ್ಲಿ ಧೂಳು ಏಳದಂತೆ ಕ್ರಮವಹಿಸಲಾಗಿದೆ. ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಮೈದಾನದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶ ತ್ಯಾಜ್ಯ ಸ್ವಚ್ಛಗೊಳಿಸಲಾಗಿದೆ.
ಈ ಸಂದರ್ಭದಲ್ಲಿ ಮುಖ್ಯ ಇಂಜಿನೀಯರ್ ಶ್ರೀಮತಿ ಸುಗುಣ, ಕಾರ್ಯಪಾಲಕ ಇಂಜಿನೀಯರ್ ಕಲ್ಲೇಶಪ್ಪ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಇತರೆ ಅಧಿಕಾರಿಗಳು ಹಾಜರಿದ್ದರು.
