ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 13.71 ಕೋಟಿ ಅಂದಾಜು ಮೌಲ್ಯದ ಒಟ್ಟು 4 ಎಕರೆ 0.04 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗುಂಡುತೋಪು, ರಾಜಕಾಲುವೆ, ಸ್ಮಶಾನ ಹಾಗೂ ಸರ್ಕಾರಿ ಗುಂಡುತೋಪು ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.
ಬೆಂಗಳೂರು ಪೂರ್ವ ತಾಲ್ಲೂಕಿನ ವರ್ತೂರು ಹೋಬಳಿಯ ಹರಳೂರು ಗ್ರಾಮದ ಸ.ನಂ 8 ರ ಗುಂಡುತೋಪು ಜಮೀನು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.22 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 4.40 ಕೋಟಿಗಳಾಗಿರುತ್ತದೆ. ಬಿದರಹಳ್ಳಿ ಹೋಬಳಿಯ ದೊಡ್ಡಗುಬ್ಬಿ ಗ್ರಾಮದ ಸ.ನಂ.50ರ ಗುಂಡುತೋಪು ಜಮೀನು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.02 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 1.00 ಕೋಟಿಗಳಾಗಿರುತ್ತದೆ.
ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಹೋಬಳಿಯ ವೀರಸಂದ್ರ ಗ್ರಾಮದ ಸ.ನಂ. 69, 77, 78, 68 & 71 ರ ರಾಜಕಾಲುವೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.18.00 ಲಕ್ಷಗಳಾಗಿರುತ್ತದೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರಕೆರೆ ಹೋಬಳಿಯ ಮಾರೇನಹಳ್ಳಿ ಗ್ರಾಮದ ಸ.ನಂ 4ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.22 ಗುಂಟೆಗಳಾಗಿದ್ದು ಅಂದಾಜು, ಮೌಲ್ಯ ರೂ 66.00 ಲಕ್ಷಗಳಾಗಿರುತ್ತದೆ. ತಾವರೆಕೆರೆ ಹೋಬಳಿಯ ನಾಗನಹಳ್ಳಿ ಗ್ರಾಮದ ಸ.ನಂ 36ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.19 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. 57.00 ಲಕ್ಷಗಳಾಗಿರುತ್ತದೆ. ತಾವರೆಕೆರೆ ಹೋಬಳಿಯ ನಾಗನಹಳ್ಳಿ ಗ್ರಾಮದ ಸ.ನಂ 38ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.06 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. 1.38 ಕೋಟಿಗಳಾಗಿರುತ್ತದೆ.
ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಸೊಂಡೇಕೊಪ್ಪ ಗ್ರಾಮದ ಸ.ನಂ 123 ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 52.00 ಲಕ್ಷಗಳಾಗಿರುತ್ತದೆ. ದಾಸನಪುರ ಹೋಬಳಿಯ ಬೈಲುಕೋನೇನಹಳ್ಳಿ ಗ್ರಾಮದ ಸ.ನಂ 19 ರ ಸರ್ಕಾರಿ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.04 ಗುಂಟೆಗಳಾಗಿದ್ದು. ಅಂದಾಜು ಮೌಲ್ಯ ರೂ 5.00 ಕೋಟಿಗಳಾಗಿರುತ್ತದೆ.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕರು, ವಿವಿಧ ತಾಲ್ಲೂಕಿನ ತಹಶೀಲ್ದಾರ್ ರವರುಗಳು ಉಪಸ್ಥಿತರಿದ್ದರು.
