ಸಮಗ್ರ ಸುದ್ದಿ

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ

Share

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ 77ನೇ ಗಣರಾಜ್ಯೋತ್ಸವ ದಿನಾಚರಣೆ-2026 ರ ಅಂಗವಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಪಿ. ರಾಜೇಂದ್ರ ಚೋಳನ್ ಅವರು ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ತರುವಾಯ ಮಹಾತ್ಮ ಗಾಂಧಿ‌ಜಿ ಹಾಗೂ ಭಾರತ ರತ್ನ ಡಾ: ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್, ಜಂಟಿ ಆಯುಕ್ತರುಗಳಾದ ಕೆ. ರಂಗನಾಥ್, ಹೇಮಂತ್ ಶರಣ್, ಮುಖ್ಯ ಅಭಿಯಂತರರಾದ ವಿಜಯ್ ಕುಮಾರ್ ಹರಿದಾಸ್, ಅಧೀಕ್ಷಕ ಅಭಿಯಂತರರು ಚಂದ್ರಶೇಖರ, ಕಂದಾಯ ಅಧಿಕಾರಿಗಳು, ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.


Share

You cannot copy content of this page