ಬೆಂಗಳೂರು: ಕಂದಾಯ ಇಲಾಖೆಯ ಬೆಂಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೂ ಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಕಾನೂನು ಸಲಹೆ ನೀಡಲು ತಾತ್ಕಾಲಿಕ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಹಿರಿಯ ಸಿವಿಲ್ ನ್ಯಾಯಾಧೀಶರು ತಮ್ಮ ಸ್ವವಿವರದೊಂದಿಗೆ ನೇರವಾರಿ ಜಿಲ್ಲಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 13 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ, ಬೆಂಗಳೂರು ನಗರ ಜಿಲ್ಲೆ, ಕಂದಾಯ ಭವನ ಆವರಣ, ಕೆ.ಜಿ.ರಸ್ತೆ, ಬೆಂಗಳೂರು -09 ಅಥವಾ ದೂರವಾಣಿ ಸಂಖ್ಯೆ 080-22211106 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
