ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ಬಲಪಡಿಸಲು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ನಗರ ಜಿಲ್ಲೆಗೆ ವಿಪತ್ತು ನಿರ್ವಹಣೆಯಲ್ಲಿ ನೈಪುಣ್ಯತೆ ಹೊಂದಿದವರನ್ನು ಮಾಸಿಕ ರೂ.48,400/- ಗಳ ಸಂಭಾವನೆಯೊಂದಿಗೆ ತಾತ್ಕಾಲಿಕವಾಗಿ 2026 ನೇ ಏಪ್ರಿಲ್ 02 ರವರೆಗೆ ಗುತ್ತಿಗೆ ಆಧಾರ ಮೇಲೆ ಮಾಡಿಕೊಳ್ಳಲಾಗವುದು. ಆಸಕ್ತರು ಅರ್ಜಿಗಳನ್ನು ಜನವರಿ 31ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಬೆಂಗಳೂರು ನಗರ ಜಿಲ್ಲೆ, ಕಂದಾಯ ಭವನ ಹಿಂಭಾಗ, ಕೆ.ಜಿ.ರಸ್ತೆ, ಬೆಂಗಳೂರು ಇಲ್ಲಿ ಕಚೇರಿ ವೇಳೆಯಲ್ಲಿ ಮಾಹಿತಿಯನ್ನು ಪಡೆಯಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
