ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ

Share

ಬೆಂಗಳೂರು: ನಗರದ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶಾಸಕಾಂಗ ಸಭೆ ನಡೆಯಿತು.

ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಕೆ.ಜೆ.ಜಾರ್ಜ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಆರ್.ವಿ.ದೇಶಪಾಂಡೆ, ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಎನ್.ಎಸ್. ಬೊಸರಾಜು, ದಿನೇಶ್ ಗುಂಡೂರಾವ್ ಮತ್ತು ಸತೀಶ್ ಜಾರಕಿಹೊಳಿ ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ‌ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಧಿವೇಶನದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿಯ ನರೇಗಾ ಮೇಲಿನ ಚರ್ಚೆ ವೇಳೆ ಪ್ರತಿಯೊಬ್ಬರೂ ಅರ್ಥಪೂರ್ಣವಾಗಿ ಪಾಲ್ಗೊಳ್ಳುವಂತೆ, ವಿಷಯ ಮಂಡನೆ ಮಾಡುವಂತೆ ಕರೆ ನೀಡಿದರು.


Share

You cannot copy content of this page