ಬೆಂಗಳೂರು: ಕೋಲಾರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಗ್ರಾಮೀಣ ರಸ್ತೆಗಳು ಅತೀವೃಷ್ಠಿಯಿಂದ ಹಾಗೂ ವಾಹನದಟ್ಟನೆಯಿಂದ ಹಾನಿಯಾಗಿರುವ ಗ್ರಾಮೀಣ ರಸ್ತೆಗಳ ದುರಸ್ತಿ ಮತ್ತು ಅಭಿವೃದ್ಧಿ ಪಡಿಸಲು ಕಳೆದ ಎರಡು ವರ್ಷಗಳಲ್ಲಿ 231.89 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಇದರಲ್ಲಿ 80 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದರು
ಇಂದು ವಿಧಾನ ಪರಿಷತ್ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಇನ್ನೂ ಹೆಚ್ಚಿನ ರಸ್ತೆ ದುರಸ್ತಿಯಾಗಬೇಕಿದ್ದರೆ, ಕಾಮಗಾರಿ ಪೂರ್ಣಗೊಂಡ ನಂತರ ಹಣ ಪಾವತಿ ಮಾಡಲಾಗುವುದು ಎಂದು ತಿಳಿಸಿದರು.
