ಸಮಗ್ರ ಸುದ್ದಿ

ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ

Share

ಬೆಂಗಳೂರು:ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.

ರಾಜ್ಯ ಸರ್ಕಾರದ ಆದೇಶದನ್ವಯ, ಅವರು ಪ್ರಸ್ತುತ ನಿರ್ವಹಿಸುತ್ತಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಸ್ಥಾನದ ಜೊತೆಗೆ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ನೆರವೇರಿಸಲಿದ್ದಾರೆ.

ಈ ಹಿಂದೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಪಂಕಜ್ ಕುಮಾರ್ ಪಾಂಡೆ ಅವರು ಡಾ. ಮನೋಹರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.


Share

You cannot copy content of this page