ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿ ಸುಮಾರು 7,000 ಆಸ್ತಿ ಮಾಲೀಕರು ಒಟ್ಟು 437 ಕೋಟಿ ರೂ.ಗಳಿಗಿಂತ ಹೆಚ್ಚಿನ ಆಸ್ತಿ ತೆರಿಗೆ ಬಾಕಿಯನ್ನು ಉಳಿಸಿಕೊಂಡಿದ್ದಾರೆ.
ಈ ಸಂಬಂಧ ಆಸ್ತಿ ಮಾಲೀಕರಿಗೆ ಬೇಡಿಕೆ ನೋಟಿಸ್‌ಗಳನ್ನು ಕಳುಹಿಸಲಾಗಿದೆ. ಆದರೂ ಸಹ ಅವರು ತೆರಿಗೆ ಪಾವತಿಸದೆ ಇರುವುದರಿಂದ, ಮುಂದಿನ ಕ್ರಮವಾಗಿ ಜಪ್ತಿ ಆದೇಶಗಳನ್ನು ಹೊರಡಿಸಲಾಗಿದೆ.
ಜಪ್ತಿ ಆದೇಶಗಳ ಹೊರಡಿಸಿದ ಬಳಿಕವೂ ತೆರಿಗೆ ಪಾವತಿ ಆಗದಿರುವ ಹಿನ್ನೆಲೆಯಲ್ಲಿ, ಕೊನೆಯ ಕ್ರಮವಾಗಿ ಈ ಆಸ್ತಿಗಳನ್ನು 17-02-2026 ರಂದು ಆಯಾ ವಲಯಗಳ ಜಂಟಿ ಆಯುಕ್ತರ ಕಚೇರಿಗಳಲ್ಲಿ ಹರಾಜು ಮಾರಾಟಕ್ಕೆ ನಿಗದಿಪಡಿಸಲಾಗಿದೆ.
ಹರಾಜಿಗೆ ಸಂಬಂಧಿಸಿದ ನೋಟಿಸ್‌ಗಳ ಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಪ್ರಕಟಿಸಲಾಗಿದೆ. ಸಂಬಂಧಿತ ಆಸ್ತಿ ಮಾಲೀಕರು ತಕ್ಷಣವೇ https://BBMPTax.karnataka.gov.in ಮೂಲಕ ಆನ್‌ಲೈನ್ ಪಾವತಿ ಮಾಡಿದಲ್ಲಿ, ಹರಾಜು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳಬಹುದು.
