ಶಿಕ್ಷಣ / ಉದ್ಯೋಗ

ಭಾರತೀಯ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್ ಸಿ) ಅಧಿಸೂಚನೆ ಪ್ರಕಟ

Share

ಬೆಂಗಳೂರು: ಭಾರತೀಯ ನಾಗರಿಕ ಸೇವಾ ಪರೀಕ್ಷೆ ಅಧಿಸೂಚನೆಯನ್ನು ಯುಪಿಎಸ್ ಸಿ ತನ್ನ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ.

2026 ರ ಮೇ 24ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಮುಖ್ಯ ಪರೀಕ್ಷೆಗಳು ಆಗಸ್ಟ್ 21ರಿಂದ ಆರಂಭವಾಗಲಿವೆ. ಅರ್ಜಿ ಸಲ್ಲಿಸಲು ಫೆಬ್ರವರಿ 24ರ ಸಂಜೆ 6 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

ಅಧಿಕೃತ ವೆಬ್ ಸೈಟ್ upsc.gov.in ಅಥವಾ upsconline.nic.in ಮೂಲಕ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಒಟ್ಟು 933 ಹುದ್ದೆಗಳಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಪರೀಕ್ಷೆ ನಡೆಯಲಿದೆ. ಸಾಮಾನ್ಯ, ಹಿಂದುಳಿದ ವರ್ಗ, ಆರ್ಥಿಕವಾಗಿ ಹಿಂದುಳಿದ ಪುರುಷ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಮಹಿಳೆಯರು, ವಿಕಲಚೇತನರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪೂರ್ವಭಾವಿ ಪರೀಕ್ಷೆಗೆ ಎರಡು ಪತ್ರಿಕೆಗಳು ಹಾಗೂ ಮುಖ್ಯ ಪರೀಕ್ಷೆಗೆ 9 ಪತ್ರಿಕೆಗಳನ್ನು ನಿಗದಿಪಡಿಸಲಾಗಿದೆ ಎಂದು ಕೇಂದ್ರ ಲೋಕಸೇವಾ ಆಯೋಗ ತಿಳಿಸಿದೆ.


Share

You cannot copy content of this page