ಸಮಗ್ರ ಸುದ್ದಿ

ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬಜೆಟ್ ಪೂರ್ವಭಾವಿ ಸಭೆ

Share

ಬೆಂಗಳೂರು: ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು, 2026-27ನೇ ಸಾಲಿನ‌ ಆಯವ್ಯಯ ಪೂರ್ವಭಾವಿ ಸಭೆಯನ್ನು ಶಕ್ತಿ ಭವನದಲ್ಲಿ ಆರಂಭಿಸಿದ್ದು ಮೊದಲಿಗೆ ಅರಣ್ಯ ಮತ್ತು ಪರಿಸರ ಇಲಾಖೆ ಜೊತೆಗೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿಯವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಆರ್ಥಿಕ‌ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಧಾನ ಮಂಡಲ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಿನವಿಡೀ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ವಿವಿಧ ಇಲಾಖೆಗಳ ಉನ್ನತಾಧಿಕಾರಿಗಳೊಂದಿಗೆ ಚರ್ಚೆ ನಡೆಯುತ್ತಿದೆ. ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆ, ಪ್ರವಾಸೋದ್ಯಮ, ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ, ಕಾರ್ಮಿಕ, ಒಳಾಡಳಿತ, ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಿಗದಿಯಾಗಿದೆ.
ಇಂದು ಸಂಜೆ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಹಲವು ಪ್ರಮುಖ ವಿಷಯಗಳ ಚರ್ಚೆ ನಡೆಯಲಿದೆ.


Share

You cannot copy content of this page