ಸಮಗ್ರ ಸುದ್ದಿ

ಎನ್.ಎಂಡಿಸಿ ಅಕ್ರಮ ಅದಿರು ರವಾನೆ; ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

Share


ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಎನ್.ಎಂ.ಡಿ.ಸಿ.ಯಿಂದ ಅಕ್ರಮ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆದೇಶ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಅವರು, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತ್ರಿಸದಸ್ಯ ತಂಡ ರಚಿಸಿ ತನಿಖೆ ನಡೆಸಿ 7 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ.

ಸದರಿ ಪ್ರಕರಣದಲ್ಲಿ ಅರಣ್ಯ ಪ್ರದೇಶದಿಂದ ಕಬ್ಬಿಣದ ಅದಿರು ಅಕ್ರಮವಾಗಿ ಸಾಗಾಟವಾಗಿದೆಯೇ, ನಿಯಮಗಳ ಉಲ್ಲಂಘನೆ ಆಗಿದೆಯೇ ಎಂಬ ತನಿಖೆ ನಡೆಸುವಂತೆ ಸ್ಪಷ್ಟಪಡಿಸಿರುವ ಅರಣ್ಯ ಸಚಿವರು, ಆರೋಪಿ ಲಾರಿ ಚಾಲಕ ನೀಡಿದ ಮಾಹಿತಿ ಆಧರಿಸಿ ಎರಡೂವರೆ ಸಾವಿರ ಟನ್ ಕಬ್ಬಿಣದ ಅದಿರನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿರುವುದಾಗಿ


Share

You cannot copy content of this page