ಸಮಗ್ರ ಸುದ್ದಿ

ಕೆಎಸ್‍ಎಂಸಿಎ ವ್ಯವಸ್ಥಾಪಕ ನಿರ್ದೇಶಕರಾಗಿ ಆನಂದ್ ಅಧಿಕಾರ ಸ್ವೀಕಾರ

Share

ಬೆಂಗಳೂರು: ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ (ಕೆಎಸ್‍ಎಂಸಿ&ಎ) ವ್ಯವಸ್ಥಾಪಕ ನಿರ್ದೇಶಕರಾಗಿ ಬಿ. ಆನಂದ್ ಅವರು ಗುರುವಾರ ಅಧಿಕಾರ ವಹಿಸಿಕೊಂಡರು.

ಕೆಎಸ್‍ಎಂಸಿ&ಎ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೊಹಮ್ಮದ್ ಅತೀಕುಲ್ಲಾ ಷರೀಫ್ ಅವರನ್ನು ಸರ್ಕಾರ ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರಿನ ಜಂಟಿನಿರ್ದೇಶಕರ ಹುದ್ದೆಗೆ ವರ್ಗಾವಣೆಗೊಳಿಸಿದ ಹಿನ್ನೆಲೆಯಲ್ಲಿ, ತೆರವಾದ ಸ್ಥಾನಕ್ಕೆ ಚಿತ್ರದುರ್ಗ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಬಿ. ಆನಂದ್ ಅವರನ್ನು ಸರ್ಕಾರ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್‍ಗೆ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿದ್ದು, ಬೆಂಗಳೂರಿನ ಕಚೇರಿಯಲ್ಲಿ ಆನಂದ್ ಅವರು ಗುರುವಾರ ಅಧಿಕಾರ ವಹಿಸಿಕೊಂಡರು.


Share

You cannot copy content of this page