ಬೆಂಗಳೂರು: ಕೋಲಾರದ ವೇಮಗಲ್ ನಲ್ಲಿಂದು ಹಮ್ಮಿಕೊಳ್ಳಲಾಗಿರುವ ಟಿಎಎಸ್.ಎಲ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಫ್ರೆಂಚ್ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್ ಅವರು ಇಂದು ಬೆಂಗಳೂರಿಗೆ ಆಗಮಿಸಿದರು.
ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಫ್ರೆಂಚ್ ರಕ್ಷಣಾ ಸಚಿವರಿಗೆ ವಿವಿಧ ಮಿಲಿಟರಿ ಪಡೆಗಳಿಂದ ಗೌರವ ವಂದನೆಯನ್ನು ಸಲ್ಲಿಸಲಾಯಿತು.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಕೋಲಾರದ ವೇಮಗಲ್ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ TASL ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಸಂಜೆ ನವದೆಹಲಿಗೆ ಹಿಂದಿರುಗಲಿದ್ದಾರೆ.
