ಬೆಂಗಳೂರು: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ ವತಿಯಿಂದ 30 ಕೋಟಿ 34 ಲಕ್ಷದ 78 ಸಾವಿರದ 500 ರೂಪಾಯಿ ಮೊತ್ತದ ಡಿವಿಡೆಂಡ್ ನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು ನೀಡಲಾಯಿತು.
ಸರ್ಕಾರದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿವಿಡೆಂಡ್ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣಬೈರೇಗೌಡ, ನಿಗಮದ ಅಧ್ಯಕ್ಷರು ಸೇರಿ ಹಲವರು ಉಪಸ್ಥಿತರಿದ್ದರು.
