ಸಮಗ್ರ ಸುದ್ದಿ

ಬೆಂಗಳೂರು ಭೇಟಿಗಾಗಿ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನಮಂತ್ರಿ ಡಿಕ್ ಶೂಫ್

Share

​ಬೆಂಗಳೂರು: ಬೆಂಗಳೂರು ಭೇಟಿಗಾಗಿ ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಡಿಕ್ ಶೂಫ್ (H.E. Mr. Dick Schoof) ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ನೆದರ್ ಲ್ಯಾಂಡ್ಸ್ ಪ್ರಧಾನಿಗಳನ್ನು ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ ಗುಪ್ತ ಅವರು ಹೂ ಗುಚ್ಛ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಕೆ. ಜಿ ಜಗದೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

​ ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಅವರು ಫೆಬ್ರವರಿ 20 ರಂದು ಆರ್.ಟಿ. ನಗರದಲ್ಲಿರುವ ಫಿಲಿಪ್ಸ್ ಇನ್ನೋವೇಶನ್ ಕ್ಯಾಂಪಸ್, ಇನ್ಫೆಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ಸಂಚಾರ ಪೊಲೀಸ್ ನಿಯಂತ್ರಣ ಕೇಂದ್ರಕ್ಕೆ, ಭಾರತೀಯ ವಿಜ್ಞಾನ ಸಂಸ್ಥೆ (IISc) ಗೆ ಭೇಟಿ ನೀಡಲಿದ್ದಾರೆ.‌ ನಂತರ ಬೆಂಗಳೂರಿನ ಉದ್ಯಮಿಗಳೊಂದಿಗೆ ಹೋಟೆಲ್ ಫೋರ್ ಸೀಸನ್ಸ್‌ನಲ್ಲಿ ಮಧ್ಯಾಹ್ನದ ಭೋಜನ ಸಭೆ ನಡೆಸಲಿದ್ದಾರೆ. ನಂತರ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಯಾಣಿಸಲಿದ್ದಾರೆ.


Share

You cannot copy content of this page