ಕ್ರೀಡೆ

ರಣಜಿ ಸೆಮಿಫೈನಲ್ ಹಣಾಹಣಿ; ಉತ್ತರಾಖಂಡ್ ವಿರುದ್ಧದ ಪಂದ್ಯ ಡ್ರಾನಲ್ಲಿ ಅಂತ್ಯ; ಫೈನಲ್ ಪ್ರವೇಶಿಸಿದ ಕರ್ನಾಟಕ

Share

ಲಕ್ನೋ : ರಣಜಿ ಟೂರ್ನಿಯಲ್ಲಿ 11 ವರ್ಷಗಳ ಬಳಿಕ ಕರ್ನಾಟಕ ತಂಡ ಫೈನಲ್ ಪ್ರವೇಶಿಸಿದೆ. ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ನಡೆದ ಉತ್ತರಾಖಂಡ್ ಮತ್ತು ಕರ್ನಾಟಕ ನಡುವಿನ ಸೆಮಿಫೈನಲ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ.

ಈ ಪಂದ್ಯವು ಡ್ರಾನಲ್ಲಿ ಕೊನೆಗೊಂಡರೂ ಮೊದಲ ಇನಿಂಗ್ಸ್‌ನಲ್ಲಿನ 503 ರನ್‌ಗಳ ಮುನ್ನಡೆಯ ಆಧಾರದ ಮೇಲೆ ಕರ್ನಾಟಕ ತಂಡ ಫೈನಲ್ ಪ್ರವೇಶಿಸಿದೆ.

ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್‌ನಲ್ಲಿ 827 ರನ್‌ಗಳ ಗುರಿ ಪಡೆದ ಉತ್ತರಾಖಂಡ್ 5ನೇ ದಿನದಾಟದ ಅಂತ್ಯಕ್ಕೆ ಕಲೆಹಾಕಿದ್ದು 260 ರನ್‌ಗಳು ಮಾತ್ರ. ಇದರೊಂದಿಗೆ ಕರ್ನಾಟಕ-ಉತ್ತರಾಖಂಡ್ ನಡುವಣ ಸೆಮಿಫೈನಲ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ಮೊದಲ ಇನಿಂಗ್ಸ್‌ನಲ್ಲಿನ ಮುನ್ನಡೆಯ ಆಧಾರದ ಮೇಲೆ ಕರ್ನಾಟಕ ತಂಡವು ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಫೆಬ್ರವರಿ 24 ರಿಂದ ಆರಂಭವಾಗಲಿರುವ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ತಂಡಗಳು ಮುಖಾಮುಖಿಯಾಗಲಿವೆ.


Share

You cannot copy content of this page