ಸಮಗ್ರ ಸುದ್ದಿ

ಮುಷ್ಕರ ಹಿಂಪಡೆದ ಸಾರಿಗೆ ನೌಕರರು; ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಮಾರ್ಚ್ 2 ರವರೆಗೆ ಗಡುವು

Share

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ನೌಕರರು ಮಾರ್ಚ್ 2 ರವರೆಗೆ ಸರ್ಕಾರಕ್ಕೆ ಗಡುವು ನೀಡಿದ್ದಾರೆ.

38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಹಿಂಬಾಕಿ ನೀಡುವುದಾಗಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ವೇತನ ಪರಿಷ್ಕರಣೆಗೂ ಸರ್ಕಾರ ಒಪ್ಪಿಕೊಂಡಿದೆ. ಆದರೆ 38 ತಿಂಗಳ ಹಿಂಬಾಕಿ ಹಣ ನೀಡಬೇಕೆಂದು ನೌಕರರು ಪಟ್ಟು ಹಿಡಿದಿದ್ದಾರೆ.

ಕೆಎಸ್‌ಆರ್‌ಟಿಸಿ ನಿರ್ದೇಶಕ ಅಕ್ರಂ ಪಾಷಾ, ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನೌಕರರ ಜತೆ ಚರ್ಚಿಸಿ, ಮುಷ್ಕರವನ್ನು ಹಿಂಪಡೆಯುವಂತೆ ಸೂಚಿಸಿದ್ದರು. ಬಳಿಕ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದುಕೊಂಡಿದ್ದು ನಾಳೆಯಿಂದ ಮುಷ್ಕರ ನಡೆಸದಿರಲು ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಮಾರ್ಚ್ 2 ರ ಒಳಗಾಗಿ ಬೇಡಿಕೆ ಈಡೇರದಿದ್ದರೆ ಮುಷ್ಕರ ನಡೆಸುವುದಾಗಿ ನೌಕರರು ಎಚ್ಚರಿಕೆ ನೀಡಿದ್ದಾರೆ.


Share

You cannot copy content of this page