ಸಮಗ್ರ ಸುದ್ದಿ

ಮಾರಿಕಾಂಬೆ ಜಾತ್ರೆ: ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು

Share

ಬೆಂಗಳೂರು: ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ವಿಶೇಷ ಎಕ್ಸ್ ಪ್ರೆಸ್ ರೈಲು ಫೆಬ್ರವರಿ 27 ರಂದು ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಫೆ. 28 ರಂದು ಬೆಳಿಗ್ಗೆ 5:05ಕ್ಕೆ ತಾಳಗುಪ್ಪ ತಲುಪಲಿದೆ.

ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ಫೆಬ್ರವರಿ 28 ರಂದು ಬೆಳಿಗ್ಗೆ 9:30ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 5:15ಕ್ಕೆ ಯಶವಂತಪುರ ಸೇರಲಿದೆ.

ಈ ವಿಶೇಷ ರೈಲು ಎರಡು ಮಾರ್ಗಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ ಹಾಲ್ಟ್, ಕುಂಸಿ, ಅರಸಾಳು ಹಾಲ್ಟ್, ಕೆಂಚನಾಳು ಹಾಲ್ಟ್, ಆನಂದಪುರಂ, ಅಡ್ಡೇರಿ ಹಾಲ್ಟ್ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಹೊಂದಿರಲಿದ್ದು, ಅದರಲ್ಲಿ 1 ಪ್ರಥಮ ದರ್ಜೆ ಮತ್ತು ಎಸಿ 2-ಟೈರ್, 2 ಎಸಿ ತ್ರೀ-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್ಎಲ್ಆರ್/ಡಿ) ಬೋಗಿಗಳು ಇರಲಿವೆ.

ಜಾತ್ರಾ ಮಹೋತ್ಸವಕ್ಕೆ ತೆರಳುವ ಭಕ್ತಾದಿಗಳು ಮತ್ತು ಸಾರ್ವಜನಿಕ ಪ್ರಯಾಣಿಕರು ಈ ರೈಲು ಸೇವೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.


Share

You cannot copy content of this page