ಕೊಲಂಬೊ: ಶ್ರೀಲಂಕಾದ ಕೊಲಂಬೊದಲ್ಲಿ ನಡೆದ ಟಿ-20 ಮಹಿಳಾ ಅಂಧರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಚೊಚ್ಚಲ ಆವೃತ್ತಿಯಲ್ಲಿ ಭಾರತ ಮಹಿಳೆಯರ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.
ನಿನ್ನೆ ನಡೆದ ಫೈನಲ್ ಪಂದ್ಯದಲ್ಲಿ ನೇಪಾಳ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಗಳಿಸುವ ಮೂಲಕ ಭಾರತ ತಂಡ ಇತಿಹಾಸ ಸೃಷ್ಟಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನೇಪಾಳ, 5 ವಿಕೆಟ್ ನಷ್ಟಕ್ಕೆ 114 ರನ್ ಗಳಿಸಲಷ್ಟೇ ಶಕ್ತವಾಯಿತು. 115 ರನ್‌ಗಳ ಗುರಿ ಬೆನ್ನತ್ತಿದ ಭಾರತ 47 ಎಸೆತಗಳು ಬಾಕಿ ಇರುವಾಗಲೇ ಗುರಿ ತಲುಪಿ ಜಯ ತನ್ನದಾಗಿಸಿಕೊಂಡಿತು.
ಭಾರತದ ಪರ ಖುಲಾ ಶರೀರ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
