ಸಮಗ್ರ ಸುದ್ದಿ

ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ |ಕರ್ನಾಟಕವನ್ನು ಜಾಗತಿಕ ‘ಡಿಜಿಟಲ್ ಕಂಟೆಂಟ್’ ಹಬ್ ಆಗಿ ರೂಪಿಸುವುದೇ ಸರ್ಕಾರದ ಆದ್ಯತೆ: ಸಿಎಂ

Share

ಬೆಂಗಳೂರು: ಕರ್ನಾಟಕವು ಈಗಾಗಲೇ ಐಟಿ-ಬಿಟಿ ಕ್ಷೇತ್ರದಲ್ಲಿ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದೆ. ಈಗ ಅನಿಮೇಷನ್, ವಿಶ್ಯುವಲ್ ಎಫೆಕ್ಟ್ಸ್ ಗೇಮಿಂಗ್ ಮತ್ತು ಕಾಮಿಕ್ಸ್ (AVGC) ವಲಯದಲ್ಲಿ ರಾಜ್ಯವನ್ನು ಜಾಗತಿಕ ನಾಯಕನನ್ನಾಗಿ ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು Department of Economics Information Technology and Biotechnology ಇವರ ವತಿಯಿಂದ ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ inaguration of 7th edition of GAFX ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಹೊಸ’AVGC-XR ನೀತಿ 2.0 ಬಿಡುಗಡೆ: ಸೃಜನಶೀಲ ಉದ್ಯಮಕ್ಕೆ ಹೆಚ್ಚಿನ ವೇಗ ನೀಡಲು ರಾಜ್ಯ ಸರ್ಕಾರವು ‘AVGC-XR ನೀತಿ 2.0’ ಅನ್ನು ಜಾರಿಗೆ ತಂದಿದೆ. ಈ ನೀತಿಯು ನವೋದ್ಯಮಗಳಿಗೆ (Startups) ಹೆಚ್ಚಿನ ಉತ್ತೇಜನ, ಸಬ್ಸಿಡಿ ಮತ್ತು ತಾಂತ್ರಿಕ ಬೆಂಬಲವನ್ನು ಒದಗಿಸಲಿದೆ ಎಂದು ಹೇಳಿದರು.

ಲಕ್ಷಾಂತರ ಉದ್ಯೋಗಾವಕಾಶ: ಮುಂದಿನ ಐದು ವರ್ಷಗಳಲ್ಲಿ ಈ ವಲಯದಲ್ಲಿ ಸುಮಾರು 30,000 ಕ್ಕೂ ಹೆಚ್ಚು ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಸೃಜನಶೀಲ ಕಲಾವಿದರು ಮತ್ತು ತಾಂತ್ರಿಕ ತಜ್ಞರಿಗೆ ಕರ್ನಾಟಕವು ನೆಚ್ಚಿನ ತಾಣವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಾದೇಶಿಕ ಸಮಾನತೆ:

ಸೃಜನಶೀಲ ತಂತ್ರಜ್ಞಾನ ಕೇವಲ ಬೆಂಗಳೂರಿಗೆ ಸೀಮಿತವಾಗಬಾರದು. ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡದಂತಹ ನಗರಗಳಲ್ಲಿ ‘ಸೆಂಟರ್ ಆಫ್ ಎಕ್ಸಲೆನ್ಸ್’ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಪ್ರಾದೇಶಿಕವಾಗಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗುವುದು.

ಕೌಶಲ್ಯಾಭಿವೃದ್ಧಿಗೆ ಒತ್ತು:

ಐಟಿಐ ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಅನಿಮೇಷನ್ ಮತ್ತು ಗೇಮಿಂಗ್ ಕ್ಷೇತ್ರದಲ್ಲಿ ವಿಶೇಷ ತರಬೇತಿ ನೀಡಲು ಸರ್ಕಾರ ಬದ್ಧವಾಗಿದೆ. ಈ ಮೂಲಕ ಜಾಗತಿಕ ಮಾರುಕಟ್ಟೆಗೆ ಬೇಕಾದ ಕೌಶಲ್ಯಯುತ ಮಾನವ ಸಂಪನ್ಮೂಲವನ್ನು ಸಿದ್ಧಪಡಿಸಲಾಗುವುದು.ಕನ್ನಡ ಮತ್ತು ಸಂಸ್ಕøತಿಯ ಬಳಕೆ: ನಮ್ಮ ಶ್ರೀಮಂತ ಜಾನಪದ ಕಲೆ ಮತ್ತು ಕಥೆಗಳನ್ನು ಅನಿಮೇಷನ್ ಹಾಗೂ ಗೇಮಿಂಗ್ ಮೂಲಕ ಜಾಗತಿಕ ಮಟ್ಟಕ್ಕೆ ತಲುಪಿಸುವಂತೆ ಉದ್ಯಮಿಗಳಿಗೆ ಕರೆ ನೀಡಿದರು.

ನಮ್ಮ ಸರ್ಕಾರವು ಕೇವಲ ತಂತ್ರಜ್ಞಾನಕ್ಕೆ ಮಾತ್ರವಲ್ಲ, ಸೃಜನಶೀಲತೆಗೂ ಸಮಾನ ಅವಕಾಶ ನೀಡುತ್ತದೆ. ವಿಶ್ವದ ದೊಡ್ಡ ದೊಡ್ಡ ಸಿನಿಮಾಗಳ ಹಿಂದೆ ಕನ್ನಡಿಗರ ಶ್ರಮವಿರುವುದು ನಮಗೆ ಹೆಮ್ಮೆಯ ವಿಷಯ. ಈ ಉದ್ಯಮಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ಬೆಂಗಳೂರನ್ನು ವಿಶ್ವದ ‘ಸೃಜನಶೀಲ ರಾಜಧಾನಿ’ಯನ್ನಾಗಿ ಮಾಡುವುದೇ ಸರ್ಕಾರದ ಗುರಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್:

ರಾಜ್ಯ ಸರ್ಕಾರವು ಮಾಹಿತಿ ತಂತ್ರಜ್ಞಾನದ ಜೊತೆಗೆ ಸೃಜನಶೀಲ ತಂತ್ರಜ್ಞಾನ ಕ್ಷೇತ್ರದಲ್ಲೂ (AVGC) ಮುಂಚೂಣಿಯಲ್ಲಿರಲು ಬದ್ಧವಾಗಿದೆ. ಬೆಂಗಳೂರನ್ನು ವಿಶ್ವದ ಸೃಜನಶೀಲ ರಾಜಧಾನಿಯನ್ನಾಗಿ (Creative Capital of the World) ರೂಪಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಜಾಗತಿಕ ಮಟ್ಟದಲ್ಲಿ ಕರ್ನಾಟಕದ ಸ್ಥಾನ: ವಿಶ್ವದ ಹೆಸರಾಂತ ಚಲನಚಿತ್ರಗಳಾದ ‘ಅವತಾರ್’, ‘ಅವೆಂಜರ್ಸ್’ ಸೇರಿದಂತೆ ಹಲವು ಅಂತರರಾಷ್ಟ್ರೀಯ ಯೋಜನೆಗಳ ಹಿಂದೆ ಬೆಂಗಳೂರಿನ ಪ್ರತಿಭೆಗಳ ಶ್ರಮವಿದೆ. ನಮ್ಮ ರಾಜ್ಯದ ಯುವಜನತೆಯ ಸೃಜನಶೀಲತೆಗೆ ಜಾಗತಿಕ ಮನ್ನಣೆ ಸಿಗುತ್ತಿರುವುದು ಹೆಮ್ಮೆಯ ವಿಷಯ ಎಂದು ಉಪಮುಖ್ಯಮಂತ್ರಿಗಳು ಶ್ಲಾಘಿಸಿದರು.

ಹೊಸ AVGC-XR ನೀತಿ ಜಾರಿ:

ಅನಿಮೇಷನ್, ವಿಷುಯಲ್ ಎಫೆಕ್ಟ್ಸ್ ಗೇಮಿಂಗ್ ಮತ್ತು ಕಾಮಿಕ್ಸ್ (AVGC) ವಲಯಕ್ಕೆ ಹೆಚ್ಚಿನ ಉತ್ತೇಜನ ನೀಡಲು ರಾಜ್ಯ ಸರ್ಕಾರವು ಅತ್ಯಾಧುನಿಕ AVGC-XR 2.0 ನೀತಿಯನ್ನು ಜಾರಿಗೆ ತಂದಿದೆ. ಈ ಮೂಲಕ ನವೋದ್ಯಮಗಳಿಗೆ ಆರ್ಥಿಕ ನೆರವು ಮತ್ತು ರಿಯಾಯಿತಿಗಳನ್ನು ನೀಡಲಾಗುವುದು.ಉದ್ಯೋಗಾವಕಾಶ ಮತ್ತು ಕೌಶಲ್ಯಾಭಿವೃದ್ಧಿ: ಮುಂದಿನ ದಿನಗಳಲ್ಲಿ ಈ ವಲಯವು ಲಕ್ಷಾಂತರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ. ಕೇವಲ ಬೆಂಗಳೂರಿಗೆ ಸೀಮಿತವಾಗದೆ, ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡದಂತಹ ನಗರಗಳಲ್ಲೂ ಇಂತಹ ಕೇಂದ್ರಗಳನ್ನು ಸ್ಥಾಪಿಸಿ, ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಮೂಲಸೌಕರ್ಯಕ್ಕೆ ಆದ್ಯತೆ: ನಮ್ಮ ಯುವಜನತೆ ಕೇವಲ ಕೆಲಸ ಹುಡುಕುವವರಾಗಬಾರದು, ಅವರು ಕೆಲಸ ನೀಡುವ ಉದ್ಯಮಿಗಳಾಗಬೇಕು. ಅವರಿಗೆ ಪೂರಕವಾದ ಮೂಲಸೌಕರ್ಯ ಮತ್ತು ತಾಂತ್ರಿಕ ಬೆಂಬಲವನ್ನು ಸರ್ಕಾರ ಒದಗಿಸಲಿದೆ ಎಂದರು.ತಂತ್ರಜ್ಞಾನ ಮತ್ತು ಕಲೆ ಸಮ್ಮಿಲನಗೊಂಡಾಗ ಅದ್ಭುತಗಳು ಸೃಷ್ಟಿಯಾಗುತ್ತವೆ. ಬೆಂಗಳೂರು ಈಗಾಗಲೇ ಐಟಿ ಹಬ್ ಆಗಿ ಗುರುತಿಸಿಕೊಂಡಿದೆ, ಈಗ ಸೃಜನಶೀಲ ತಂತ್ರಜ್ಞಾನದಲ್ಲೂ ವಿಶ್ವಕ್ಕೆ ಮಾದರಿಯಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಅನಿಮೇಷನ್ ಉದ್ಯಮದ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.


Share

You cannot copy content of this page