ಕ್ರೀಡೆ

ಟಿ 20 ವಿಶ್ವಕಪ್ ಕ್ರಿಕೆಟ್‌ |ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮಹತ್ವದ ಪಂದ್ಯ

Share

ಕೊಲ್ಕತ್ತಾ: ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿಂದು ಐಸಿಸಿ ಟಿ-20 ವಿಶ್ವಕಪ್ ಕ್ರಿಕೆಟ್ ನ ಸೂಪರ್ 8ರ ಹಂತದ ಪ್ರಮುಖ ಪಂದ್ಯಾವಳಿ ನಡೆಯಲಿದೆ. ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಈ ಪಂದ್ಯದಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ಮುಖಾಮುಖಿಯಾಗಲಿವೆ. ಎರಡೂ ತಂಡಗಳಿಗೆ ಈ ಪಂದ್ಯ ಅತ್ಯಂತ ಮಹತ್ವದಾಗಿದ್ದು, ಪ್ರಸಕ್ತ ಭಾರತವು ಆಡಿರುವ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಸೋತು, ಮತ್ತೊಂದರಲ್ಲಿ ಗೆದ್ದು 2 ಅಂಕ ಪಡೆದಿದೆ.

ಅದೇ ರೀತಿ ವೆಸ್ಟ್ ಇಂಡೀಸ್ ಸಹ ತಲಾ ಒಂದು ಪಂದ್ಯದಲ್ಲಿ ಗೆದ್ದು 2 ಅಂಕಗಳೊಂದಿಗೆ ಸಮಬಲ ಸಾಧಿಸಿದೆ. ಆದರೆ, ವೆಸ್ಟ್ ಇಂಡೀಸ್ ನ ರನ್ ರೈಟ್ ಹೆಚ್ಚಿದೆ. ಒಂದು ವೇಳೆ ಈ ಪಂದ್ಯ ರದ್ದಾದಲ್ಲಿ ಭಾರತಕ್ಕೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಕೈತಪ್ಪಲಿದೆ.

2016ರಲ್ಲಿ ಟಿ-20 ವಿಶ್ವಕಪ್ ಗೆದ್ದ ನಂತರ ವೆಸ್ಟ್ ಇಂಡೀಸ್ ಯಾವುದೇ ಐಸಿಸಿ ಪಂದ್ಯಾವಳಿಯಲ್ಲಿ ಸೆಮಿಫೈನಲ್ ಗೆ ತಲುಪಿಲ್ಲ. ಹಾಗಾಗಿ ಈ ಪಂದ್ಯ ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಸೆಮಿಫೈನಲ್ ಪ್ರವೇಶಿಸಲಿದ್ದು, ಸೋತ ತಂಡವು ಟೂರ್ನಿಯಿಂದ ಹೊರ ಬೀಳಲಿದೆ.

ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಇಬ್ಬನಿಯ ಪ್ರಭಾವ ಹೆಚ್ಚಿರುವ ಸಾಧ್ಯತೆ ಇರುವುದರಿಂದ ಟಾಸ್ ಗೆದ್ದ ತಂಡ ಇಲ್ಲಿ ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಎರಡೂ ತಂಡಗಳ ಬಲಾಬಲವನ್ನು ಗಮನಿಸಿದಾಗ ಅತಿಥೇಯ ಭಾರತ ತಂಡ ಹೆಚ್ಚು ಬಲಶಾಲಿಯಾಗಿ ಗೋಚರಿಸುತ್ತಿದೆ. ಎರಡೂ ತಂಡಗಳು ಕಠಿಣ ಅಭ್ಯಾಸದಲ್ಲಿ ತೊಡಗಿವೆ.


Share

You cannot copy content of this page