ಸಮಗ್ರ ಸುದ್ದಿ

ಸುಪ್ರೀಂ ಕೋರ್ಟ್‌ನ 53 ನೇ ಸಿಜೆಐ ಆಗಿ ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರಮಾಣವಚನ ಸ್ವೀಕಾರ

Share

ನವದೆಹಲಿ : ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಸುಪ್ರೀಂ ಕೋರ್ಟ್‌ನ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ನಿವೃತ್ತರಾಗಿದ್ದರಿಂದ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.


Share

You cannot copy content of this page