ಬೆಂಗಳೂರು: ಕರ್ನಾಟಕದಲ್ಲಿ ಮಕ್ಕಳ ರಕ್ಷಣೆ ಮತ್ತು ಅವರ ಹಕ್ಕುಗಳಿಗೆ ಸಂಬಂಧಿಸಿದಂತೆ ಸರ್ಕಾರವು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕಾರ್ಯನಿರ್ವಾಹಕ ಅಧ್ಯಕ್ಷರಾದ ಅನು ಶಿವರಾಮನ್ ಅವರು ತಿಳಿಸಿದರು.
ಅವರು ಇಂದು ನಗರದ ಕರ್ನಾಟಕ ನ್ಯಾಯಾಂಗ ಅಕಾಡೆಮಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಗಳ ಪ್ರಾಧಿಕಾರ, ಕರ್ನಾಟಕ ನ್ಯಾಯಾಂಗ ಅಕಾಡೆಮಿ, ಕರ್ನಾಟಕ ಉಚ್ಚ ನ್ಯಾಯಾಲಯದ ಬಾಲ ನ್ಯಾಯ ಸಮಿತಿ ಮತ್ತು ಪೋಕ್ಸೋ ಸಮಿತಿ ಹಾಗೂ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ರಕ್ಷಣೆ ನವದೆಹಲಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ರಕ್ಷಣೆಗಾಗಿ ರಾಜ್ಯಮಟ್ಟದ ನ್ಯಾಯಾಂಗ ಸಭೆ ಯನ್ನು ಉದ್ಘಾಟಿಸಿ ಮಾತನಾಡಿದರು.
ವರ್ಷದಿಂದ ವರ್ಷಕ್ಕೆ ಮಕ್ಕಳು ಕಾಣೆಯಾಗುತ್ತಿದ್ದಾರೆ. ಮಕ್ಕಳು ಕಾಣೆಯಾಗಲು ಕಾರಣವೇನೆಂದು ಮೊದಲು ನಾವು ತಿಳಿಯಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರವು ನಿರಂತರವಾಗಿ ಕೆಲಸ ಮಾಡುತ್ತಿದ್ದು. ಕಾನೂನಡಿಯಲ್ಲಿ ಮಕ್ಕಳಿಗೆ ರಕ್ಷಣೆ ನೀಡಲಾಗುತ್ತಿದೆ ಎಂದರು.
ಇ ಸಂದರ್ಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಬಾಲ ನ್ಯಾಯ ಮತ್ತು ಪೋಕ್ಸೋ ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಎಸ್. ಸುನಿಲ್ ಯಾದವ್ ಹಾಗೂ ನವದೆಹಲಿಯ ಮಕ್ಕಳ ಹಕ್ಕುಗಳ ರಾಷ್ಟ್ರೀಯ ಸಂಚಾಲಕರಾದ ರವಿಕಾಂತ್ ಹಾಗೂ ಇತರರು ಉಪಸ್ಥಿತರಿದ್ದರು.
