ಸಮಗ್ರ ಸುದ್ದಿ

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ | ಅಬುದಾಬಿಯಲ್ಲಿ ವಿಮಾನಯಾನ ಸ್ಥಗಿತಗೊಂಡು ಸಂಕಷ್ಟಕ್ಕೊಳಗಾಗಿದ್ದ ಕನ್ನಡಿಗರು ಬೆಂಗಳೂರಿಗೆ ವಾಪಸ್

Share

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದಾಗಿ ಅಬುದಾಬಿಯಲ್ಲಿ ವಿಮಾನಯಾನ ಸ್ಥಗಿತಗೊಂಡು ಸಂಕಷ್ಟಕ್ಕೊಳಗಾಗಿದ್ದ ನೂರಾರು ಕನ್ನಡಿಗರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಆಗಮಿಸಿದ್ದಾರೆ.

ಸುಮಾರು 400ಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತ ಇತಿಹಾದ್ ಏರ್ ವೇಸ್ ನ ವಿಮಾನ ಇಂದು ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತು. ಅದರಲ್ಲಿ ನೂರಾರು ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದರು.

ಹಲವು ಪ್ರಯಾಣಿಕರು ವಿಮಾನ ಕಾರ್ಯಾಚರಣೆ ರದ್ಧಾಗಿದ್ದರಿಂದ ತಮಗೆ ಭಯವಾಗಿತ್ತು. ಆದರೆ, ವಿಮಾನಯಾನ ಸಂಸ್ಥೆಗೆ ವಸತಿ ಸೌಕರ್ಯ ಕಲ್ಪಿಸಿತ್ತು. ಆನಂತರ, ತಮ್ಮನ್ನು ಸುರಕ್ಷಿತವಾಗಿ ಕರೆತಂದಿರುವುದಕ್ಕೆ ಸಂತಸವಾಗುತ್ತಿದೆ ಎಂದು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.


Share

You cannot copy content of this page