ಸಮಗ್ರ ಸುದ್ದಿ

ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ರಿಯಾಯಿತಿ ದರದಲ್ಲಿ ಜಮೀನು ಮಂಜೂರಾತಿ – ಸಚಿವ ಬಿ.ಎಸ್ ಸುರೇಶ್ ಸ್ಪಷ್ಟನೆ

Share

ಬೆಂಗಳೂರು:ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕಾಗಿ ಸರ್ಕಾರಿ ಜಮೀನನ್ನು ರಿಯಾಯಿತಿ ದರದಲ್ಲಿ ಮಂಜೂರು ಮಾಡಿರುವ ಕುರಿತು ಎದ್ದಿರುವ ಪ್ರಶ್ನೆಗಳಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ಇಂದು ವಿಧಾನ ಪರಿಷತ್ತಿನಲ್ಲಿ ಮಾಹಿತಿ ನೀಡಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಜಮೀನು ಹಂಚಿಕೆಯ ಪ್ರಕ್ರಿಯೆ ಮತ್ತು ದರ ನಿಗದಿಯ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಿದರು.ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕಾಗಿ ನಾಗರಿಕ ಸೌಲಭ್ಯ (ಸಿಎ) ನಿವೇಶನಗಳನ್ನು ಮಂಜೂರು ಮಾಡಲು ಸಚಿವ ಸಂಪುಟವು ತೀರ್ಮಾನಿಸಿದೆ.

ತುಮಕೂರಿನಲ್ಲಿ ಬೃಹತ್ ಜಮೀನು ಹಂಚಿಕೆ ಮತ್ತು ದರ ವಿವರ:ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಮೀನು ಮಂಜೂರು ಮಾಡಿರುವ ಕುರಿತು ತುಮಕೂರು ತಾಲ್ಲೂಕು, ಕಸಬ ಹೋಬಳಿ, ಮರುಳೂರು ಗ್ರಾಮದ ಸರ್ವೆ ನಂ. 87/2 ರಲ್ಲಿ ಒಟ್ಟು 02 ಎಕರೆ ಜಮೀನನ್ನು ಉಪನೋಂದಣಾಧಿಕಾರಿಗಳ 2023-24ನೇ ಸಾಲಿನ ಮಾರ್ಗಸೂಚಿ ದರದಂತೆ ಪ್ರತಿ ಎಕರೆಗೆ ರೂ. 1,70,00,000/- (ಒಂದು ಕೋಟಿ ಎಪ್ಪತ್ತು ಲಕ್ಷ ರೂ.) ನಿಗದಿಪಡಿಸಲಾಗಿದೆ.

ಸಚಿವ ಸಂಪುಟದ ಪ್ರಕರಣ ಸಂಖ್ಯೆ: ಸಿ 396/2025, ದಿನಾಂಕ: 22.05.2025 ರ ನಿರ್ಣಯದಂತೆ, ಪ್ರಸ್ತುತ ಮಾರ್ಗಸೂಚಿ ಮೌಲ್ಯದ ಕೇವಲ ಶೇ. 05 ರಷ್ಟು (5%) ದರವನ್ನು ವಿಧಿಸಿ ಜಮೀನು ಮಂಜೂರು ಮಾಡಲಾಗಿದೆ.ಇತರ ಜಿಲ್ಲೆಗಳ ಸ್ಥಿತಿಗತಿ:ಚಾಮರಾಜನಗರ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸದ್ಯಕ್ಕೆ ಯಾವುದೇ ನಾಗರಿಕ ಸೌಲಭ್ಯ (ಸಿಎ) ನಿವೇಶನಗಳನ್ನು ಹಂಚಿಕೆ ಮಾಡಲಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಕಾನೂನುಬದ್ಧತೆ ಮತ್ತು ಆಕ್ಷೇಪಣೆಗಳಿಲ್ಲ:ಜಮೀನು ಮಂಜೂರಾತಿ ಪ್ರಕ್ರಿಯೆಯಲ್ಲಿ ಯಾವುದೇ ನಿಯಮಗಳ ಉಲ್ಲಂಘನೆಯಾಗಿಲ್ಲ ಎಂದು ಸರ್ಕಾರ ಪ್ರತಿಪಾದಿಸಿದೆ.ಕಂದಾಯ ಇಲಾಖೆ: ಈ ಮಂಜೂರಾತಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯಿಂದ ಯಾವುದೇ ರೀತಿಯ ತಕರಾರುಗಳು ಅಥವಾ ಆಕ್ಷೇಪಣೆಗಳು ಸ್ವೀಕೃತವಾಗಿಲ್ಲ. ಈ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆಯಾಗಿದೆ ಎಂಬ ಬಗ್ಗೆ ಯಾವುದೇ ದೂರುಗಳು ಸರ್ಕಾರದ ಗಮನಕ್ಕೆ ಬಂದಿಲ್ಲ. ಯಾವುದೇ ದೂರುಗಳು ಅಥವಾ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಿಲ್ಲದ ಕಾರಣ, ಈ ಮಂಜೂರಾತಿಯನ್ನು ರದ್ದುಪಡಿಸುವ ಯಾವುದೇ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ ಎಂದು ಸಚಿವರು ತಿಳಿಸಿದರು.


Share

You cannot copy content of this page